ಶಾಕುಂತಲೆ ಜತೆ ‘ತ್ರಿವಿಕ್ರಮ’ನ ಗಾನಾಬಜಾನಾ

ವಿಕ್ಕಿ-ಆಕಾಂಕ್ಷಾ ಸ್ಟೆಪ್ಸ್’ಗೆ ನೋಡುಗರು ಫಿದಾ

ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಜೂನ್ 24ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಚಿತ್ರತಂಡ, ಈಗಾಗಲೇ ರಿಲೀಸ್ ಮಾಡಿರುವ ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ.WhatsApp Image 2022 06 14 at 5.56.12 PM

ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ ‘ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್…’ ಎಂಬ ಹಾಡನ್ನು ಮೋಹನ್ ಬಿ ಕೆರೆ ಸ್ಟೂಡಿಯೋದಲ್ಲಿ ಹಾಕಲಾಗಿದ್ದ ಬೃಹತ್ ಸೆಟ್ ಹಾಗೂ ಕಲರ್ ಕಲರ್ ಕಾಸ್ಟ್ಯೂಮ್’ಗಳಲ್ಲಿ ಹಾಡಿನ ಚಿತ್ರೀಕರಣ ನಡೆಸಲಾಗಿದೆ. ಅರ್ಜುನ್ ಜನ್ಯ ಸಂಗೀತವಿರುವ ಈ ಹಾಡಿಗೆ ಭೂಷಣ್ ನೃತ್ಯ ನಿರ್ದೇಶನ ಮಾಡಿದ್ದಾರೆ. ವಿಕ್ಕಿ ಹಾಗೂ ಆಕಾಂಕ್ಷಾ ಶರ್ಮಾ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಒಟ್ಟಾರೆ ನೂರಕ್ಕೂ ಅಧಿಕ ದಿನಗಳ ಕಾಲ ಶೂಟಿಂಗ್ ನಡೆಸಿರುವ ಬಿಗ್ ಬಜೆಟ್ ಸಿನಿಮಾ ಇದಾಗಿದ್ದು, ದೊಡ್ಡ ಮಟ್ಟದಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್’ನಲ್ಲಿ ಹಾಡು ಬಿಡುಗಡೆಯಾಗಿದೆ.WhatsApp Image 2022 06 14 at 5.56.11 PM 1

ರೋಸ್, ಮಾಸ್ ಲೀಡರ್ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿರುವ ಸಹನಾ ಮೂರ್ತಿ ‘ತ್ರಿವಿಕ್ರಮ’ನಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸೋಮಣ್ಣ ಟಾಕೀಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ರಾಮ್ಕೋ ಸೋಮಣ್ಣ ಬಂಡವಾಳ ಹೂಡಿದ್ದಾರೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಯಾಗಿರುವ ‘ಪ್ಲೀಸ್ ಮಮ್ಮಿ’ ಹಾಗೂ ‘ಹನಿ ಬನಿ ಫೀಲ್ ಮೈ ಲವ್’ ಹಾಡು ಮಿಲಿಯನ್’ಗಟ್ಟಲೆ ಹಿಟ್ಸ್ ದಾಖಲಿಸಿ, ಟ್ರೆಂಡಿಂಗ್’ನಲ್ಲಿದೆ.WhatsApp Image 2022 06 14 at 5.56.12 PM 1

ತುಳಸಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದವರು ತಾರಾಗಣದಲ್ಲಿದ್ದಾರೆ. ಸಂತೋಷ್ ರೈ ಪತಾಜೆ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ.WhatsApp Image 2022 06 14 at 5.56.11 PM

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…