‘TRP ರಾಮ’ ಸಿನಿಮಾದಿಂದ ಬಂತು ಧರೆಗೆ ದೊಡ್ಡವಳು ಹಾಡು…ನ.3ಕ್ಕೆ ತೆರೆಗೆ ಬರ್ತಿದೆ ಮಹಾಲಕ್ಷ್ಮಿ ಕಂಬ್ಯಾಕ್ ಚಿತ್ರ

'TRP Rama'

ಟ್ರೇಲರ್ ಮೂಲಕ ಭಾರೀ ಸದ್ದು ಮಾಡಿರುವ TRP ರಾಮ ‘TRP Rama’  ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 3ರಂದು ರಾಜ್ಯಾದ್ಯಂತ ಚಿತ್ರ ತೆರೆಗೆ ಬರ್ತಿದೆ. ಹಿರಿಯ ನಟಿ ಮಹಾಲಕ್ಷ್ಮಿ ಕಂಬ್ಯಾಕ್ ಮಾಡ್ತಿರುವ TRP ರಾಮ ಸಿನಿಮಾದ ಧರೆಗೆ ದೊಡ್ಡವಳು ಎಂಬ ಹಾಡು ಅನಾವರಣಗೊಂಡಿದೆ. A2 ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಈ ಗೀತೆ ರಿಲೀಸ್ ಆಗಿದ್ದು, ಲಿಂಗರಾಜು-ರವಿ ಪ್ರಸಾದ್ ಹಾಗೂ ಪ್ರವೀಣ್ ಸೂಡ ಸಾಹಿತ್ಯ ಬರೆದಿದ್ದು, ತಾಯಿ ಕುರಿತ ಈ ಹಾಡಿಗೆ ಸಾಧು ಕೋಕಿಲ ಧ್ವನಿಯಾಗಿದ್ದಾರೆ. ರಾಜ್ ಗುರು ಹೊಸಕೋಟೆ ಟ್ಯೂನ್ ಕೂಡ ಗಮನಾರ್ಹ. ಹಾಡು ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಚಿತ್ರತಂಡ ಮಾಧ್ಯಮದರೊಟ್ಟಿಗೆ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.'TRP Rama'

ಹಿರಿಯ ನಟಿ ಮಹಾಲಕ್ಷ್ಷೀ ಮಾತನಾಡಿ, ,30 ವರ್ಷ ಆದ್ಮೇಲೆ ಒಂದೊಳ್ಳೆ ತಂಡದ ಜೊತೆ ಅಭಿನಯಿಸಿರುವ ಖುಷಿ ಇದೆ. ತಾಯಿ ಪಾತ್ರ ಮಾತ್ರವಲ್ಲ, ಇಡೀ ತಂಡ ತಾಯಿ ತರ ನೋಡಿಕೊಂಡರು. ಪ್ರಪಂಚದಲ್ಲಿ ಎರಡು ತರಹದ ಕುಟುಂಬ ಇರುತ್ತದೆ. ಒಂದು ನಾರ್ಮಲ್ ಫ್ಯಾಮಿಲಿ.. ಇನ್ನೊಂದು ಅಬ್ ನಾರ್ಮಲ್ ಫ್ಯಾಮಿಲಿ. ಅಬ್ ನಾರ್ಮಲ್ ಫ್ಯಾಮಿಲಿ ಎದುರಿಸುವ ಕಷ್ಟವನ್ನು ಕಟ್ಟಿಕೊಡುವುದೇ ಸಿನಿಮಾ ಕಥೆ. ಇದೊಂದು ಎಮೋಷನಲ್ ಸ್ಟೋರಿ. ಪ್ರತಿಯೊಬ್ಬರು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಆ ಪರಿಶ್ರಮಕ್ಕೆ ಬೆಲೆ ಸಿಗಲಿದೆ ಎಂಬ ನಂಬಿಕೆ ಇದೆ. ಸಮಾಜಕ್ಕೆ ಒಂದೊಳ್ಳೆ ಸಂದೇಶ ಕೊಡುವ ಸಿನಿಮಾ ಇದು ಎಂದರು.'TRP Rama'

ನಿರ್ದೇಶಕ‌ ಕಂ ನಟ ರವಿ ಪ್ರಸಾದ್ ಮಾತನಾಡಿ, ಕಥೆ ಸಮಯದಿಂದಲೂ, ಸಾಂಗ್ ಬರೆಯುವಾಗಲೂ ಕಣ್ಣೀರು ಬಂದಿದೆ. ಬರೆದು ರಿಪೀಟ್ ಮಾಡುವಾಗ ಎಮೋಷನಲ್ ಆಗಿದ್ದೇನೆ. ಪ್ರತಿಯೊಬ್ಬರೂ ನೋಡಲೇಬೇಕಾದ ಸಿನಿಮಾ. ನವೆಂಬರ್ 3ಕ್ಕೆ ತೆರೆಗೆ ಬರ್ತಿದೆ. ಕನ್ನಡ ಚಿತ್ರಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ನಾವು ಅದರಲ್ಲಿ ಒಂದು ಭಾಗವಾಗಿರುವುದಕ್ಕೆ ಖುಷಿ ಇದೆ. ತೆಲುಗು, ಮಲಯಾಳಂ, ತಮಿಳು ಭಾಷೆಗೆ ಡಬ್ ಮಾಡುವ ಪ್ಲಾನ್ ನಲ್ಲಿದ್ದೇವೆ. ಪ್ರಪಂಚದಲ್ಲಿ ನಡೆಯುವ ಸತ್ಯವನ್ನು ಸಿನಿಮಾದಲ್ಲಿ ಹೇಳಿದ್ದೇವೆ. ಸೋಷಿಯಲ್ ಜೊತೆಗೆ ಕಮರ್ಷಿಯಲ್ ಅಂಶಗಳು ಸಿನಿಮಾದಲ್ಲಿವೆ ಎಂದರು.'TRP Rama'

ಪತ್ರಕರ್ತೆ ಪಾತ್ರದಲ್ಲಿ ನಟಿಸಿರುವ ಸ್ಪರ್ಶ ಮಾತನಾಡಿ, ನವೆಂಬರ್ 3ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಸಾಮಾಜಿಕ ಜವಾಬ್ದಾರಿ ಇಟ್ಟುಕೊಂಡು ಮಾಡಿರುವ ಚಿತ್ರ. ಚಿತ್ರದ ಗೆಲುವಿನ ಜೊತೆಗೆ ಸಮಾಜಕ್ಕೆ ಗೆಲುವು ಸಿಕ್ಕಿದಾಗ ಹಾಗೇ ಎನ್ನುವುದು ನನ್ನ ಅಭಿಪ್ರಾಯ ಎಂದರು.’TRP ರಾಮ’ ಸಿನಿಮಾಗೆ ರವಿಪ್ರಸಾದ್‌ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಪ್ರಮುಖ ಪಾತ್ರದಲ್ಲೂ ಅವರು ನಟಿಸಿದಾರೆ. ‘ಅಶುತೋಶ್ ಪಿಕ್ಚರ್ಸ್’ ಬ್ಯಾನರ್ ಮೂಲಕ ಈ ಸಿನಿಮಾ ನಿರ್ಮಾಣವಾಗಿದೆ. ತಾಯಿ ಪಾತ್ರದಲ್ಲಿ ಮಹಾಲಕ್ಷ್ಮಿ ನಟಿಸಿದ್ದಾರೆ. ಪತ್ರಕರ್ತೆಯಾಗಿ ಸ್ಪರ್ಶ ಅಭಿನಯಿಸಿದ್ದಾರೆ.'TRP Rama'

ರಾಜ್ ಗುರು ಹೊಸಕೋಟೆ ಅವರು ಸಂಗೀತ ನೀಡಿದ್ದಾರೆ. ಸುನಿಲ್ ಕಶ್ಯಪ್ ಅವರು ಸಂಕಲನ ಮತ್ತು ಗುರುಪ್ರಸಾದ್ ಅವರು ಛಾಯಾಗ್ರಹಣ ಮಾಡಿದ್ದಾರೆ. ರಾಕೇಶ್ ಆಚಾರ್ಯ ಅವರ ಹಿನ್ನೆಲೆ ಸಂಗೀತ, ಪ್ರವೀಣ್ ಸೂಡ ಅವರ ಸಂಭಾಷಣೆ ಈ ಚಿತ್ರಕ್ಕಿದೆ.

ಬೇಸರಕ್ಕೆ ಕುತೂಹಲವೇ ಔಷಧಿ. ಕುತೂಹಲಕ್ಕೆ ಯಾವ ಔಷಧಿಯೂ ಇಲ್ಲ.

TRP ಸತ್ಯ ಘಟನೆಗಳನ್ನ ಆಧರಿಸಿ ಬರ್ತಿರೋ ಸಿನಿಮಾ ಆಗಿದೆ. ಚಿತ್ರದ ನಿರ್ದೇಶಕ ರವಿ ಪ್ರಸಾದ್ ಇಲ್ಲಿ ಆ ವಿಕೃತ ರಾಮನ ಪಾತ್ರ ಮಾಡಿದ್ದಾರೆ. ಆದರೆ ಇಲ್ಲಿ “TRP” ಅಂದ್ರೇನೂ ಅನ್ನೋ ಪ್ರಶ್ನೆ ಕುತೂಹಲಕ್ಕೆ ನವೆಂಬರ್ 3ರಂದು ಉತ್ತರ ಸಿಗಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…