ಮತ್ತೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಉಡುಂಬಾ ನಿರ್ದೇಶಕ ಶಿವರಾಜ್ ತಯಾರಿ – ಶೀಘ್ರದಲ್ಲೇ ಟೈಟಲ್ ರಿವೀಲ್.

udumba director shivaraj new movie

‘ಉಡುಂಬಾ’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ನಿರ್ದೇಶಕ ಶಿವರಾಜ್ ಮತ್ತೊಂದು ಹೊಸ ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ‘ಐ 1’, ‘ಮೃತ್ಯುಂಜಯ’ ಸಿನಿಮಾ ನಿರ್ಮಿಸಿರುವ ಎಸ್ ಪಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಐದನೇ ಸಿನಿಮಾ ಇದಾಗಿದ್ದು, ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ ಶಿವರಾಜ್.udumba director shivaraj new movie

ಈ ಬಾರಿ ಮತ್ತೊಂದಿಷ್ಟು ಹೊಸತನದೊಂದಿಗೆ ಶಿವರಾಜ್ ಕಥೆ ರೆಡಿ ಮಾಡಿಕೊಂಡಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನಕ್ಕೆ ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ. ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಸದ್ಯದಲ್ಲೇ ಸಿನಿಮಾದ ಟೈಟಲ್ ರಿವೀಲ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ. ದೊಡ್ಡ ತಾರಾಬಳಗ ಸಿನಿಮಾದಲ್ಲಿರಲಿದ್ದು, ಡಿಸೆಂಬರ್ ಕೊನೆಯಲ್ಲಿ ಸಿನಿಮಾ ಸೆಟ್ಟೇರಲಿದೆ ಎಂದು ನಿರ್ದೇಶಕ ಶಿವರಾಜ್ ತಿಳಿಸಿದ್ದಾರೆ.udumba director shivaraj new movie

ಥ್ರಿಲ್ಲರ್ ಜಾನರ್ ಒಳಗೊಂಡ ಈ ಚಿತ್ರದಲ್ಲಿ ಕಿಶೋರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ‘ಐ1’ ಸಿನಿಮಾದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟ ಕಿಶೋರ್ ಗಿದು ಎರಡನೇ ಸಿನಿಮಾ. ನಾಯಕಿಯರ ಹುಡುಕಾಟದಲ್ಲಿ ಚಿತ್ರತಂಡವಿದ್ದು, ಇಬ್ಬರು ನಾಯಕಿಯರು ಸಿನಿಮಾದಲ್ಲಿರಲಿದ್ದು ಟಾಪ್ ನಟಿಯರ ತಲಾಶ್ ನಲ್ಲಿದ್ದಾರೆ ನಿರ್ದೇಶಕರು.udumba director shivaraj new movie

ಎಸ್ ಪಿ ಪಿಕ್ಚರ್ಸ್ ಬ್ಯಾನರ್ ನಡಿ ಶೈಲಜಾ ಪ್ರಕಾಶ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಈ ಬ್ಯಾನರ್ ನಲ್ಲಿ ಮೂಡಿ ಬರ್ತಿರುವ ಐದನೇ ಸಿನಿಮಾ ಇದಾಗಿದೆ. ರಂಗಾಯಣ ರಘು, ಸುಜಯ್ ಶಾಸ್ತ್ರಿ, ತೆಲುಗು ಹಾಗೂ ತಮಿಳು ಸಿನಿಮಾ ಖ್ಯಾತಿಯ ಮಧುಸೂದನ್ ಚಿತ್ರದ ತಾರಾಬಳಗದಲ್ಲಿದ್ದಾರೆ.udumba director shivaraj new movie

ಝೀ ವಾಹಿನಿಯ ಸರಿಗಮಪ ಮೆಂಟರ್ ಸುಚೇತನ್ ರಂಗಸ್ವಾಮಿ ಸಂಗೀತ ನಿರ್ದೇಶನ, ಕಬ್ಜ, ಮಾರ್ಟಿನ್, ನಟ ಸಾರ್ವಭೌಮ ಖ್ಯಾತಿಯ ಮಹೇಶ್ ರೆಡ್ಡಿ ಸಂಕಲನ ಚಿತ್ರಕ್ಕಿದೆ. ಭರ್ಜರಿ ಚೇತನ್, ಜೋಗಿ ಪ್ರೇಮ್, ಅಲೆಮಾರಿ ಸಂತು ಹಾಗೂ ಹೊಸ ಪ್ರತಿಭೆ ಸಂತೋಷ್ ಸಾಹಿತ್ಯದಲ್ಲಿ ಚಿತ್ರದ ಹಾಡುಗಳು ಮೂಡಿ ಬರಲಿದ್ದು, ಬೆಂಗಳೂರು, ಮಂಗಳೂರು, ಮೈಸೂರು, ಉಡುಪಿಯಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…