ಡಿ.ಸತ್ಯಪ್ರಕಾಶ್ ಹೊಸ ಚಿತ್ರ “ಅನ್ ಲಾಕ್ ರಾಘವ’
ಅಶ್ವಿನಿ ಪುನೀತ್ ರಾಜ್ ಕುಮಾರ್ ಶೀರ್ಷಿಕೆ ಅನಾವರಣ

Cinipark,kannada entertainment channels, kannada entertainment news, Kannada Cinema News, kannada film news in english, Cineloka, cinibuzz kannada, kannada picture, ಕನ್ನಡ ಚಲನಚಿತ್ರ ಸುದ್ದಿ, FilmiBeat Kannada, ಸಿನಿಮಾ ಸುದ್ದಿ, Chitraloka, Kannada Film News, Kannada Film, Latest Kannada cinema News,

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’, ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಅನ್ ಲಾಕ್ ರಾಘವ’ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.unlock raghavA kannada movie poster launch

ನಿರ್ಮಾಪಕ ಸತ್ಯಪ್ರಕಾಶ್ ಮಾತನಾಡಿ, ಇಂಡಸ್ಟ್ರೀಗೆ ಬಂದಾಗ ದೊಡ್ಡ ಟೀಂ ಕಟ್ಟಬೇಕು ಎಂಬ ಆಸೆ ಇತ್ತು. ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡ್ತಿರುವ ಈ ಸಿನಿಮಾ ನಿಜವಾದ ಕಮರ್ಷಿಯಲ್ ಸಿನಿಮಾ. ತುಂಬಾ ಹೊಸ ಪ್ರೆಸೆಂಟೇಷನ್ ನಲ್ಲಿ ಸಿನಿಮಾ ಮಾಡಿದ್ದೇವೆ. ಇಡೀ ಸಿನಿಮಾ ರೋಮ್ಯಾಂಟಿಕ್ ಕಾಮಿಡಿ ಜರ್ನಿ ಇರುತ್ತದೆ. ಮೂರು ರೀತಿ ಕಾಮಿಡಿ ಇರುತ್ತದೆ. ಪಾತ್ರ ಏನು ಮಾತಾಡ್ತಾರೆ ಅಂತಾ ಗೊತ್ತಾಗಲ್ಲ. ಆದ್ರೆ ಪ್ರೇಕ್ಷಕ ನಗ್ತಾರೆ. ಅನೂಪ್ ಸೀಳಿನ್ ಸರ್ ಅದ್ಭುತ ಮ್ಯೂಸಿಕ್ ಕೊಟ್ಟಿದ್ದಾರೆ ಎಂದರು.unlock raghavA kannada movie poster launch

‘ಭಾಗ್ಯರಾಜ್’, ‘ಕಳ್ಬೆಟ್ಟದ ದರೋಡೆಕೋರರು’, ‘ರಾಜು ಜೇಮ್ಸ್ ಬಾಂಡ್’ ಚಿತ್ರಗಳನ್ನು ನಿರ್ದೇಶಿಸಿರುವ ದೀಪಕ್ ಮಧುವನಹಳ್ಳಿ ನಿರ್ದೇಶಿಸುತ್ತಿರುವ ಈ ಸಿನಿಮಾಗೆ ಡಿ ಸತ್ಯಪ್ರಕಾಶ್ ಕತೆ-ಚಿತ್ರಕತೆ-ಸಂಭಾಷಣೆ ಬರೆದು ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ.unlock raghavA kannada movie poster launch

‘ವೀಕೆಂಡ್’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ನವನಟ ಮಿಲಿಂದ್ ನಾಯಕನಾಗಿ ಹಾಗೂ ‘ಲವ್ ಮಾಕ್ಟೇಲ್ – 2’ ಚಿತ್ರದ ರೇಚಲ್ ಡೇವಿಡ್ ನಾಯಕಿಯಾಗಿ ಬಣ್ಣ ಹಚ್ಚಿದ್ದು, ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ಸುಂದರ್ ವೀಣಾ, ಧರ್ಮಣ್ಣ ಕಡೂರು, ಭೂಮಿಶೆಟ್ಟಿ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದು, ಲವಿತ್ ಛಾಯಾಗ್ರಹಣ ಹಾಗೂ ಅಜಯ್ ಕುಮಾರ್ ಸಂಕಲನವಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…