ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು “ಬುದ್ದಿವಂತ” ನ ಹೊಸ ಸಿನಿಮಾ.

“A”, “ಓಂ” ನಂತಹ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಉಪೇಂದ್ರ ನಾಯಕರಾಗೂ ಜನಪ್ರಿಯ. “ಉಪ್ಪಿ ೨” ಚಿತ್ರದ ನಂತರ ಉಪೇಂದ್ರ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ. ಉಪೇಂದ್ರ ನಿರ್ದೇಶನದ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆ ಶುಭಘಳಿಗೆ ಈಗ ಬಂದಿದೆ.‌ ಉಪೇಂದ್ರ ನಿರ್ದೇಶಿಸಿ, ನಾಯಕರಾಗೂ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಸುದೀಪ್ ಆರಂಭ ಫಲಕ ತೋರಿದರು. ಶಿವರಾಜಕುಮಾರ್ ಕ್ಯಾಮೆರಾ ಚಾಲಾನೆ ಮಾಡಿದರು. ಗೀತಾ ಶಿವರಾಜಕುಮಾರ್, ಡಾಲಿ ಧನಂಜಯ, ವಸಿಷ್ಠ ಸಿಂಹ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.WhatsApp Image 2022 06 03 at 9.02.16 PM

ಲಹರಿ ಫಿಲಂಸ್ ಹಾಗೂ VENUS entertainers ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶನದೊಂದಿಗೆ ಉಪೇಂದ್ರ ನಾಯಕರಾಗೂ ನಟಿಸುತ್ತಿದ್ದಾರೆ.WhatsApp Image 2022 06 03 at 9.02.16 PM 1

ಮೂರುನಾಮದ ಚಿಹ್ನೆಯೊಂದು ಈ ಚಿತ್ರದ ಶೀರ್ಷಿಕೆಯಾಗಿದೆ. ಇದನ್ನು ಕೆಲವರು ಮೂರು ನಾಮ ಅಂದುಕೊಂಡರೆ, ಮತ್ತೆ ಕೆಲವರು ಯು ಮತ್ತು ಐ ಅಂದುಕೊಳ್ಳುತ್ತಾರೆ. ನಾನು ಮತ್ತು ನೀನು ಎಂಬ ಅರ್ಥ ಬರುವ ಹಾಗಿದೆ ಆ ಚಿಹ್ನೆ. ಒಟ್ಟಿನಲ್ಲಿ ತಮ್ಮ ಹಿಂದಿನ ಚಿತ್ರಗಳಲ್ಲಿ ವಿಭಿನ್ನ ಶೀರ್ಷೆಕೆಯಿಟ್ಟು ಎಲ್ಲರ ತಲೆಗೆ ಕೆಲಸ ಕೊಡುತ್ತಿದ್ದ ಉಪೇಂದ್ರ ಅವರು ಈ ಚಿತ್ರದಲ್ಲೂ ಹಾಗೆ ಮಾಡಿದ್ದಾರೆ.WhatsApp Image 2022 06 03 at 9.02.17 PM

ಇಂದಿನಿಂದ ಚಿತ್ರೀಕರಣ ಆರಂಭಿಸಿದ್ದೇವೆ. ಲಹರಿ ಸಂಸ್ಥೆಯವರು ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ವಿಭಿನ್ನ ಶೀರ್ಷಿಕೆ ಯಿಟ್ಟಿದ್ದೀನಿ. ನಿಮಗೆಲ್ಲಾ ಏನು ಅನಿಸುತ್ತದಯೋ, ಅದೇ ಶೀರ್ಷಿಕೆ ಆಗಿರುತ್ತದೆ. ನಾನು ಕಥೆ ಸಿದ್ದಮಾಡಿಕೊಂಡಿರುತ್ತೇನೆ. ಮತ್ತೆ ಬೇರೆ ಅಲೋಚನೆ ಬಂದರೆ, ಬದಲಿಸುತ್ತೀನಿ. ಚಿತ್ರದ ಶೀರ್ಷಿಕೆ ಹಾಗೂ ಕುದುರೆ ಪೋಸ್ಟರ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ. ಅದರ ಬಗ್ಗೆ ಒಬ್ಬೊಬ್ಬರ ಮನಸ್ಸಿನಲ್ಲಿ ಒಂದೊಂದು ಹೊಳೆಯುತ್ತಿದೆ. ನಿಮ್ಮಗೆಲ್ಲಾ ಏನು ಅನಿಸುವುದೊ, ಅದು ಚಿತ್ರದಲ್ಲಿ ಇರುತ್ತದೆ. ನಾನು ನನ್ನ ನಿರ್ದೇಶಕರ ತಂಡ ಹಾಗೂ ಇನ್ನೂ ಕೆಲವರ ಬಳಿ ಕಥೆಯ ಬಗ್ಗೆ ಹೇಳಿರುತ್ತೇನೆ. ಅವರಿಗೆ ಅದನ್ನು ಹೇಳಲು ಬರುವುದಿಲ್ಲ ಎಂದ ಉಪೇಂದ್ರ ಅವರು ಒಟ್ಟಿನಲ್ಲಿ ಉತ್ತಮ ಚಿತ್ರವೊಂದನ್ನು ನಿಮ್ಮ ಮುಂದೆ ಇಡುತ್ತೇನೆ. ನಿಮ್ಮ ನಿರೀಕ್ಷೆ ಸುಳ್ಳು ಮಾಡುವುದಿಲ್ಲವೆಂದು ತಿಳಿಸಿದರು.WhatsApp Image 2022 06 03 at 9.02.17 PM 2

ಕಲಾವಿದರು ಹಾಗೂ ತಾಂತ್ರಿಕವರ್ಗದ ಕುರಿತು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಉಪೇಂದ್ರ ಹೇಳಿದರು.WhatsApp Image 2022 06 03 at 9.02.17 PM 1

ಉಪೇಂದ್ರ ಅವರು ನಿರ್ದೇಶನಕ್ಕೆ ಒಪ್ಪಿರುವುದು ಖುಷಿಯಾಗಿದೆ. ಶಿವಣ್ಣ ಹಾಗೂ ಗೀತಕ್ಕ ಅವರ ಆಶೀರ್ವಾದದಿಂದ ಮೂರನೇ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಖ್ಯಾತ ಲಹರಿ ಫಿಲಂಸ್ ನವರು ನಾವು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ನಿಮ್ಮ ಹಾರೈಕೆ ಇರಲಿ ಎಂದರು ಕೆ.ಪಿ.ಶ್ರೀಕಾಂತ್.WhatsApp Image 2022 06 03 at 9.02.18 PM

ನಾನು ಹಾಗೂ ಉಪೇಂದ್ರ ಅವರು ಸಹಪಾಠಿಗಳು. ತುಂಬಾ ವರ್ಷಗಳಿಂದ ಅವರು ಪರಿಚಯ. ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವೆಂದರು ಲಹರಿ ವೇಲು.

ಲಹರಿ ಸಂಸ್ಥೆಯ ಮನೋಹರ್ ನಾಯ್ಡು, ನವೀನ್, ಕಾಕ್ರೋಜ್ ಸುಧಿ, ನಟಿ ತ್ರಿವೇಣಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…