ಬಹುತಾರಾಗಣದ ‘ಉತ್ತರಕಾಂಡ’ಕ್ಕೆ ಪೂಜೆಯ ಮೆರಗು

uttarakanda kannada movie muhurtham

ವಿಜಯ್ ಕಿರಗಂದೂರು ಅರ್ಪಿಸುತ್ತಿರುವ, ಕೆ.ಆರ್.ಜಿ ಸಂಸ್ಥೆ ನಿರ್ಮಿಸುತ್ತಿರುವ ಹಾಗೂ ರೋಹಿತ್ ಪದಕಿ ರಚಿಸಿ, ನಿರ್ದೇಶಿಸುತ್ತಿರುವ ‘ಉತ್ತರಕಾಂಡ’ ಚಿತ್ರದ ಮುಹೂರ್ತ ಇದೇ ನವೆಂಬರ್ ೬ಕ್ಕೆ, ಮಧ್ಯಾಹ್ನ ೩.೨೨ಕ್ಕೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿದೆ. ‘ರತ್ನನ್ ಪ್ರಪಂಚ’ ಯಶಸ್ಸಿನ ನಂತರ ಮತ್ತೊಮ್ಮೆ ಒಂದಾಗಿದ್ದಾರೆ ರೋಹಿತ್ ಪದಕಿ ಹಾಗೂ ಕಾರ್ತಿಕ್ ಮತ್ತು ಯೋಗಿ.ಜಿ.ರಾಜ್.uttarakanda kannada movie muhurtham


ಚಿತ್ರದ ಮುಖ್ಯ ಪಾತ್ರಧಾರಿಗಳಾದ ಧನಂಜಯ ಹಾಗು ರಮ್ಯ ಪೂಜೆಗೆ ಉಪಸ್ಥಿತರಿದ್ದರು.

ಸಿನಿರಸಿಕರಿಗೆ ಅಚ್ಚರಿ ಹಾಗೂ ಸಿಹಿ ಸುದ್ದಿಯೆಂದರೆ ಗಂಧದಗುಡಿಯ ರಾಣ ಜೇನು, ಸ್ಯಾಂಡಲ್‌ವುಡ್ ಕ್ವೀನ್ ಎಂದು ಪ್ರೀತಿಪಾತ್ರರಾಗಿರೋ ನಟಿ ರಮ್ಯ ‘ಉತ್ತರಕಾಂಡ’ ಚಿತ್ರದ ಮೂಲಕ ನಾಯಕಿಯಾಗಿ ಬೆಳ್ಳಿಪರದೆಗೆ ಹಿಂತಿರುಗುತ್ತಿದ್ದಾರೆ. ಎಂಟು ವರ್ಷಗಳ ಬಳಿಕ ತಮಗೆ ಅತ್ಯಂತ ಆಪ್ತವಾದ ಕಥೆ ಹಾಗು ಪಾತ್ರ ‘ಉತ್ತರಕಾಂಡ’ ಕೊಟ್ಟಿರುವ ಕಾರಣ ಅದಕ್ಕೆ ಬೇಕಾದ ತಯಾರಿ ಮಾಡಿಕೊಂಡು ಭಾಷೆ, ಉಡುಗೆ-ತೊಡುಗೆ ಎಲ್ಲದರ ಮೇಲೆ ಗಂಭೀರವಾಗಿ ಕಸರತ್ತು ನಡೆಸುತ್ತಿದ್ದಾರೆ ನಟಿ ರಮ್ಯ.

ಉತ್ತರಕಾಂಡದ ಬಗ್ಗೆ ಪ್ರಶ್ನಿಸಿದಾಗ ರಮ್ಯ ಹೇಳಿದ್ದು ಹೀಗೆ – “ ‘ರತ್ನನ್ ಪ್ರಪಂಚ’ ಚಿತ್ರಕ್ಕೆ ನಾಯಕಿಯ ಪಾತ್ರವನ್ನು ನನಗೆ ಕೇಳಿದಾಗ ಕಾರಣಾಂತರಗಳಿಂದ ಅದನ್ನು ಒಪ್ಪಿಕೊಳ್ಳಲಾಗಿರಲಿಲ್ಲ. ನನಗೆ ಅತ್ಯಂತ ಆಪ್ತವಾದ ಸಿನೆಮಾ ರತ್ನನ್ ಪ್ರಪಂಚ. ಅಂತಹ ಒಳ್ಳೆಯ ಸಿನೆಮಾ ತಂಡದ ಜೊತೆ ಕೈ ಜೋಡಿಸಿ ಬೆಳ್ಳಿಪರದೆಗೆ ಹಿಂತಿರುಗುತ್ತಿರುವುದು ಸಂತೋಷ ತಂದಿದೆ. ಇತ್ತೀಚಿನ ದಿನಗಳಲ್ಲಿ ಈ ತಂಡದ ಜೊತೆಗಿನ ಒಡನಾಟ ಮತ್ತು ತಂಡದವರೆಲ್ಲರು ನನ್ನ ಮೇಲೆ ತೋರುತ್ತಿರುವ ಅಭಿಮಾನ ಹಾಗು ಬಾಂಧವ್ಯ ಒಂದು ಒಳ್ಳೇ ಜಾಗದಲ್ಲಿದ್ದೀನಿ ಅನ್ನೋ ಭಾವನೆ ಕೊಟ್ಟಿದೆ. ಇಂತಹ ದೈತ್ಯ ಪ್ರತಿಭೆಗಳ ಜೊತೆ ಶೂಟಿಂಗ್ ಶುರು ಮಾಡೋದಕ್ಕೆ ಕಾಯ್ತ ಇದ್ದೀನಿ”uttarakanda kannada movie muhurtham

ಈ ಹಿಂದೆಯೇ ಚಿತ್ರತಂಡ ಹಂಚಿಕೊಂಡಂತೆ ‘ಉತ್ತರಕಾಂಡ’ದಲ್ಲಿ ಧನಂಜಯ ಮುಖ್ಯಭೂಮಿಕೆಯಲ್ಲಿದ್ದಾರೆ. ವೈವಿಧ್ಯಮಯ ಪಾತ್ರಗಳಲ್ಲಿ ನಾಯಕನಟನಾಗಿ ಮಿಂಚುತ್ತಿರುವ ಧನಂಜಯ ಅವರ ವೃತ್ತಿಯಲ್ಲೇ ಅತಿ ದೊಡ್ಡ ಸಿನೆಮಾ ‘ಉತ್ತರಕಾಂಡ’, ಅತ್ಯಂತ ಗಟ್ಟಿಯಾದ, ಕಷ್ಟವಾದ ಪಾತ್ರ ವಹಿಸಿಕೊಂಡಿರುವುದರ ಬಗ್ಗೆ ಅವರೇ ಹಂಚಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಈಗಾಗಲೇ ಧನಂಜಯ ಅವರ ಸುಕ್ಕಾ ಲುಕ್ ವೈರಲ್ ಆಗಿದೆ.

“ಒಂದೇ ದಿಕ್ಕಿನಲ್ಲಿ ಆಲೋಚಿಸುವವರು ಒಟ್ಟಿಗೆ ಸೇರಿ, ನಿಸ್ವಾರ್ಥವಾಗಿ ಸಿನಿಮಾಕ್ಕಾಗಿ, ಒಬ್ಬರು ಇನ್ನೊಬ್ಬರಿಗಾಗಿ contribute ಮಾಡಿದಾಗ ಅದ್ಭುತಗಳು ಸಂಭವಿಸುತ್ತವೆ ಎಂದು ನಾನು ನಂಬಿದ್ದೇನೆ. ಅದೆ ರೀತಿ ಆಗಿದ್ದು, ಮೈಲಿಗಲ್ಲಾಗಿದ್ದು “ರತ್ನನ್ ಪ್ರಪಂಚ” . ರೋಹಿತ್ ಪದಕಿಯಂತ ನಿರ್ದೇಶಕ ಘಟನ ಜೊತೆ ಎರಡನೆ ಪ್ರಯತ್ನ, ಕಾರ್ತಿಕ್ ಹಾಗು ಯೋಗಿ ಯಂತ ನಿರ್ಮಾಪಕ ಘಟರ ಜೊತೆ ಸತತವಾಗಿ ಮೂರನೆ ಪ್ರಯತ್ನ, ಇನ್ನೊಂದು ಮೈಲಿಗಲ್ಲಿನ ಕಡೆ ಮತ್ತೊಂದು ದಿಟ್ಟ ಹೆಜ್ಜೆ “ಉತ್ತರಕಾಂಡ”.uttarakanda kannada movie muhurtham
If I have seen further, it is by standing on the shoulder of giants – Isaac Newton
Very happy to associate with these giants again.

ಹಾಗೆ ನಮ್ಮ sandalwood queen ರಮ್ಯ ಅವರ ಜೊತೆ screen share ಮಾಡುವ ಕನಸು ಈ ಸಿನಿಮಾದ ಮೂಲಕ ಕೈಗೂಡುತ್ತಿದೆ. ಇದು ಮತ್ತೊಂದು ಖುಷಿಯ ವಿಚಾರ.

ಪ್ರತಿ ಬಾರಿ ನನ್ನ ಪರವಾಗಿ ನಿಂತು ಯುದ್ಧ ಮಾಡುವ ಮಾಧ್ಯಮ ಮಿತ್ರರು, ನನ್ನ ಮೇಲೆ ನಂಬಿಕೆಯಿಟ್ಟು ನನ್ನ ಶಕ್ತಿಯಾಗಿ ನಿಂತಿರುವ ಕನ್ನಡ ಕುಲಕೋಟಿಗೆ ನನ್ನ ಹೃದಯಪೂರ್ವಕ ನಮನಗಳು. ಹೀಗೆ ಜೊತೆಗಿರಿ, ತಪ್ಪಾದಾಗ ತಿದ್ದಿ, ಗೆಲುವಾಗುವಂತೆ ಹರಸಿ, ಮೆರೆಸಿ.” ಎಂದು ಧನಂಜಯ ಮುಕ್ತವಾಗಿ ಹಂಚಿಕೊಂಡಿದ್ದಾರೆ.uttarakanda kannada movie muhurtham

‘ಈ ಸಿನೆಮಾ ಮನುಷ್ಯನ ವಿಲಕ್ಷಣ ಮನಸ್ಸಿನ ಹೋರಾಟವನ್ನ ಬಿಂಬಿಸುತ್ತದೆ. ಸರಿ ತಪ್ಪುಗಳ ಸಿದ್ದಾಂತ, ಅಹಂಕಾರಗಳ ಗುದ್ದಾಟ. ಈ ಸಿನೆಮಾ ಒಂದು ಸೆಲೆಬ್ರೇಶನ್. ಉತ್ತರಕರ್ನಾಟಕದ ಅಧ್ಬುತ ಬದುಕಿನ ನಡುವೆ ನಡೆಯುವ ಕಥೆ ಹೇಳುತ್ತಿರುವುದು ನನಗೆ ದೊಡ್ಡ ಸವಾಲು ಮತ್ತು ಜವಾಬ್ದಾರಿ’ ಎಂದು ನಿರ್ದೇಶಕ ರೋಹಿತ್ ಪದಕಿ ಹೇಳಿದ್ದಾರೆ. ಚಿತ್ರ ಸಂಪೂರ್ಣ ಉತ್ತರಕರ್ನಾಟಕದ ಸೊಗಡಲ್ಲಿ, ಭಾಷೆಯಲ್ಲಿ ಇರುತ್ತದೆ. ಹಾಗೂ ಅಲ್ಲಿಯೇ ಚಿತ್ರೀಕರಣವಾಗಲಿದೆ ಎಂದು ಕೂಡ ಹಂಚಿಕೊಂಡಿದ್ದಾರೆ.

‘ಇನ್ ಮ್ಯಾಲಿಂದ ಫುಲ್ ಗುದ್ದಾಂಗುದ್ದಿ’ ಎಂದು ಅಡಿ-ಶೀರ್ಷಿಕೆ ಹೊಂದಿರುವ ‘ಉತ್ತರಕಾಂಡ’ ದೊಡ್ಡ ಮಟ್ಟದ ಮಾಸ್ ಮನರಂಜನೆ ನೀಡುವ ಸಿನೆಮಾ ಆಗಲಿದೆ ಎಂದು ನಿರ್ಮಾಪಕರು ನುಡಿದಿದ್ದಾರೆ. ಮುಂದಿನ ವರ್ಷದಲ್ಲಿ ಸೆಟ್ಟೇರುತ್ತಿರುವ ಚಿತ್ರಗಳಲ್ಲಿ ಅತಿ ದೊಡ್ಡ ತಾರಾಗಣ, ಹಾಗೂ ಬಜೆಟ್ ಹೊಂದಿರುವ ಚಿತ್ರ ಇದು ಎಂದು ಹೇಳಲಾಗುತ್ತಿದೆ.

“ಕೆ.ಆರ್.ಜಿ ಸಂಸ್ಥೆ ಧನಂಜಯ ಅವರ ಜೊತೆ ಕೈಜೋಡಿಸಿರುವ ಮೂರನೇ ಚಿತ್ರ ಇದು. ಚಿತ್ರರಂಗದಲ್ಲಿ ಅತ್ಯಂತ ಬೇಡಿಕೆಯಲ್ಲಿ ಇರುವ ನಟ ಧನಂಜಯ. ಸ್ಯಾಂಡಲ್‌ವುಡ್ ಕ್ವೀನ್ ರಮ್ಯ ಅವರ ಕಮ್‌ಬ್ಯಾಕ್ ಚಿತ್ರ ಇದಾಗ್ತಿರೋದು ಕೂಡ ನಮ್ಮ ಖುಷಿಯನ್ನ ದುಪ್ಪಟ್ಟು ಮಾಡಿದೆ. ಇನ್ನು ರೋಹಿತ್ ಪದಕಿ ಮತ್ತು ಕೆಆರ್‌ಜಿ ಸ್ಟುಡಿಯೋಸ್ ಸಂಬಂಧ ಉನ್ನತ ಮಟ್ಟದಲ್ಲಿದೆ. ‘ರತ್ನöನ್ ಪ್ರಪಂಚ’ ಒಂದು ಮೈಲಿಗಲ್ಲಾದ್ರೆ, ‘ಉತ್ತರಕಾಂಡ’ ಎಂದೂ ಹೇಳಿರದ, ಅನುಭವ ಪಡೆದಿರದ ಒಚಿgಟಿum Magnum Opus ಆಗುತ್ತದೆ ಅನ್ನೋದು ನಮ್ಮ ನಂಬಿಕೆ” ಎಂದು ಕಾರ್ತಿಕ್ ಮತ್ತು ಯೋಗಿ ಜಿ ರಾಜ್ ತಮ್ಮ ಸಂತೋಷವನ್ನು ವ್ಯಕ್ತ ಪಡೆಸಿದರು.daali uttarakhand kannada movie
ತಾರಾಗಣದಲ್ಲಿ ಬೇರೆ ಯಾರಾದರೂ ಇದ್ದಾರ? ಎಂದು ಪ್ರಶ್ನಿಸಿದಾಗ, ಮತ್ತಷ್ಟು ಸ್ಟಾರ್‌ಗಳ ಹೆಸರು ಇಷ್ಟರಲ್ಲೇ ಅನೌನ್ಸ್ ಮಾಡ್ತೀವಿ, ತಾರೆಯರ ಪಟ್ಟಿ ಈ ತಂಡದ ಜೊತೆ ಇಷ್ಟರಲ್ಲೇ ಕೈ ಜೋಡಿಸಲಿದೆ ಎಂಬ ಮಾತು ಹೊರಹಾಕಿದೆ ತಂಡ. ಹಾಗೆಯೇ, ಈ ಸಿನೆಮಾ ನಮ್ಮ ಸಂಸ್ಥೆಗೆ ಒಂದು ಸಂಭ್ರಮ ಎಂದು ಕಾರ್ತಿಕ್ ಮತ್ತು ಯೋಗಿ ವ್ಯಕ್ತಪಡಿಸಿದ್ದಾರೆ.

ಚಿತ್ರದ ಶೂಟಿಂಗ್ ಜನವರಿ ತಿಂಗಳಿಂದ ಪ್ರಾರಂಭವಾಗಲಿದ್ದು, ಅರವಿಂದ ಕಶ್ಯಪ್ ಕ್ಯಾಮರಾ, ಚರಣ್ ರಾಜ್ ಸಂಗೀತ ಸಂಯೋಜನೆ ಇರುತ್ತದೆ. ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲೆ ನಿರ್ವಹಿಸುತ್ತಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…