ವಾಮನ ಸಿನಿಮಾದ ಜಬರ್ದಸ್ತ್ ಟೀಸರ್ ರಿಲೀಸ್…ಆಕ್ಷನ್ ಮೂಡ್ ನಲ್ಲಿ ಶೋಕ್ದಾರ್ ಧನ್ವೀರ್

Vaamana Dhanveerrah Reeshma Nanaiah

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ ಸೆಟ್, ಭರ್ಜರಿ ಆಕ್ಷನ್, ಧನ್ವೀರ್ ನಯಾ ಗೆಟಪ್, ಬ್ಯಾಗ್ರೌಂಡ್ ಮ್ಯೂಸಿಕ್, ವಿಷ್ಯೂವಲ್ಸ್ ಎಫೆಕ್ಟ್ ಟೀಸರ್ ನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದಾರೆ.mansore 19 20 21

1.50 ನಿಮಿಷ ಇರುವ ವಾಮನ ಸಿನಿಮಾದ ಟೀಸರ್ ತುಣುಕು ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸ್ತಿದ್ದು, ಶಂಕರ್ ರಾಮನ್ ಸಾರಥ್ಯದಲ್ಲಿ ಚಿತ್ರ ಮೂಡಿ ಬರ್ತಿದೆ. ಧನ್ವೀರ್ ಗೆ ಜೋಡಿಯಾಗಿ ಏಕ್ ಲವ್ ಯಾ ಬೆಡಗಿ ರೀಷ್ಮಾ ನಾಣಯ್ಯ ನಟಿಸ್ತಿದ್ದಾರೆ. ಈಗಾಗಲೇ 70 ದಿನ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಸದ್ಯ ಬಾಕಿ ಉಳಿದ ಭಾಗದ ಚಿತ್ರೀಕರಣದಲ್ಲಿ ನಿರತವಾಗಿದೆ.Vamana Dhanveer teaser


ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಖ್ಯಾತಿ ಗಳಿಸಿರುವ ಚೇತನ್ ಕುಮಾರ್ ತಮ್ಮದೇ ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ ಟೈನ್ಮೆಂಟ್ ನಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಲವ್ ಸ್ಟೋರಿ ಜೊತೆಗೆ ಔಟ್ ಅಂಡ್ ಔಟ್ ಆಕ್ಷನ್ ಕಮರ್ಷಿಯಲ್ ಸಿನಿಮಾವಾಗಿರುವ ವಾಮನದಲ್ಲಿ ಖಳನಾಯಕನಾಗಿ ಸಂಪತ್ ನಟಿಸುತ್ತಿದ್ದು, ಉಳಿದಂತೆ ಅಚ್ಯುತ್ ಕುಮಾರ್, ತಾರಾ, ಶಿವರಾಜ್ ಕೆ ಆರ್ ಪೇಟೆ ಮತ್ತು ಕಾಕ್ರೋಚ್ ಸುದಿ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ. ಬಿ.ಅಜನೀಶ್ ಲೋಕನಾಥ್ ಸಂಗೀತ, ಮಹೇನ್ ಸಿಂಹ ಕ್ಯಾಮೆರಾ ಕೈಚಳಕ, ಸುರೇಶ್ ಆರ್ಮುಖ ಸಂಕಲನ, ಅರ್ಜುನ್ ರಾಜ್ ಆಕ್ಷನ್ ಸಿನಿಮಾಕ್ಕಿದೆ.Vamana Dhanveer teaser

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…