ವಾಸಂತಿ ನಲಿದಾಗ’ ಚಿತ್ರ ಮುಂದೂಡಿಕೆ
ಡಿಸೆಂಬರ್ ನಲ್ಲಿ ತೆರೆಗೆ ಸಾಧ್ಯತೆ

vasanthi nalidaga kannada movie release december


‘ವಾಸಂತಿ ನಲಿದಾಗ’ ಎಂಬ ಕಾಲೇಜ್ ಯೂತ್ ಲವ್ ಸ್ಟೋರಿ ಒಳಗೊಂಡ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ.

ಟೈಟಲ್ ಮೂಲಕವೇ ಸಖತ್ ಸುದ್ದಿಯಲ್ಲಿರುವ ಚಿತ್ರ ಈ ಹಿಂದೆ ‘ಕೇಳ್ರಪ್ಪೋ ಕೇಳಿ’ ವೀಡಿಯೋ ಸಾಂಗ್ ಬಿಡುಗಡೆ ಮಾಡಿ ಸೌಂಡ್ ಮಾಡಿತ್ತು ಇದೀಗ ನಾಗೇಂದ್ರ ಪ್ರಸಾದ್ ಬರೆದ ‘ಕಾಲೇಜ್ ಗೆ ಕಾಲು ಇಟ್ಟರೆ ಕನಸುಗಳು ಜೋರು’ ಎಂಬ ಮತ್ತೊಂದು ಯೂತ್ ಫುಲ್ ಸಾಂಗ್ ರಿಲೀಸ್ ಮಾಡಿದೆ. ಅಂದ್ಹಾಗೆ ಈ ಚಿತ್ರ ಅಕ್ಟೋಬರ್ 14ರಂದೇ ಬಿಡುಗಡೆಯಾಗಬೇಕಿತ್ತು. ಆದ್ರೆ ಚಿತ್ರಮಂದಿರದ ಸಮಸ್ಯೆಯಿಂದ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಇದೆಲ್ಲದರ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಇಂದು ಸಿನಿಮಾ ತಂಡ ಮಾಧ್ಯಮದೆದುರು ಬಂದಿತ್ತು.vasanthi nalidaga kannada movie release december

ನಿರ್ದೇಶಕ ರವೀಂದ್ರ ವೆಂಶಿ ಮಾತನಾಡಿ ಅಕ್ಟೋಬರ್ 14ರಂದೇ ಸಿನಿಮಾ ಬಿಡುಗಡೆಯಾಗಬೇಕಿತ್ತು. ಅದಕ್ಕಾಗಿ ಪ್ರಚಾರ ಕಾರ್ಯವನ್ನು ಮಾಡಿ ಮುಗಿಸಿದ್ದೆವು. ಆದ್ರೆ ಚಿತ್ರಮಂದಿರದ ಸಮಸ್ಯೆಯಿಂದ ಅಕ್ಟೋಬರ್ 14ರಂದು ಬಿಡುಗಡೆ ಮಾಡಲಾಗಲಿಲ್ಲ. ಇದು ಸ್ಟಾರ್ ಸಿನಿಮಾ ಅಲ್ಲ ಹೊಸಬರ ಸಿನಿಮಾ ಆದ್ರಿಂದ ದೊಡ್ಡ ಸಿನಿಮಾದ ಜೊತೆ ಕಾಂಪಿಟೇಶನ್ ಬೇಡ ಎಂದು ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಡಿಸೆಂಬರ್ ನಲ್ಲಿ ಸಿನಿಮಾ ತೆರೆಗೆ ತರಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ, ಸದ್ಯದಲ್ಲೇ ಸಿನಿಮಾ ಬಿಡುಗಡೆ ದಿನಾಂಕವನ್ನು ಅನೌನ್ಸ್ ಮಾಡಲಿದ್ದೇವೆ ಎಂದು ರವೀಂದ್ರ ವೆಂಶಿ ತಿಳಿಸಿದ್ರು. ನಾಯಕ ರೋಹಿತ್ ಶ್ರೀಧರ್ ಮಾತನಾಡಿ ಅಕ್ಟೋಬರ್ 14ರಂದು ನಮ್ಮ ಸಿನಿಮಾ ಬಿಡುಗಡೆ ಆಗಬೇಕಿತ್ತು. ಚಿತ್ರಮಂದಿರದಲ್ಲಿ ಕಾಂತಾರ, ಗುರು ಶಿಷ್ಯರು ಸಿನಿಮಾಗಳು ಚೆನ್ನಾಗಿ ಓಡುತ್ತಿದ್ದರಿಂದ ಸಿನಿಮಾ ಬಿಡುಗಡೆಯನ್ನು ಹಿಂತೆಗೆದುಕೊಂಡ್ವಿ. ಡಿಸೆಂಬರ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಲ್ಲರೂ ಸಪೋರ್ಟ್ ಮಾಡಿ ಎಂದು ತಿಳಿಸಿದ್ರು.vasanthi nalidaga kannada movie release december

ಪುಟಾಣಿ ಸಫಾರಿ, ವರ್ಣಮಯ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದ ರವೀಂದ್ರ ವೆಂಶಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಸಿನಿಮಾವಿದು. ಹೊಸ ಪ್ರತಿಭೆಗಳೊಂದಿಗೆ ಕಾಲೇಜ್ ಯೂತ್ ಲವ್ ಸ್ಟೋರಿ ಸಬ್ಜೆಕ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ಸಿನಿ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ. ಮೊದಲೇ ಹೇಳಿದ ಹಾಗೆ ವಾಸಂತಿ ನಲಿದಾಗ ಚಿತ್ರ ನವ ಹಾಗೂ ಯುವ ಪ್ರತಿಭೆಗಳಿಂದ ಕೂಡಿದೆ. ರೋಹಿತ್ ಶ್ರೀಧರ್, ಭಾವನ ಶ್ರೀನಿವಾಸ್, ಜೀವಿತ ವಸಿಷ್ಠ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಕೆ. ಎನ್ ಶ್ರೀಧರ್ ಜೇನುಗೂಡು ಬ್ಯಾನರ್ ನಡಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಶ್ರೀ ಗುರು ಸಂಗೀತ ನಿರ್ದೇಶನ, ಸಿ.ರವಿಚಂದ್ರನ್ ಸಂಕಲನ, ಪ್ರಮೋದ್ ಭಾರತೀಯ ಛಾಯಾಗ್ರಾಹಣ ಚಿತ್ರಕ್ಕಿದೆ. ಹಾಡುಗಳಿಗೆ ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ಗೌಸ್ ಫೀರ್ ಸಾಹಿತ್ಯವಿದೆ. ಸಾಯಿಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಂಜು ಪಾವಗಡ, ಮಿಮಿಕ್ರಿ ಗೋಪಿ ಒಳಗೊಂಡ ಅನುಭವಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…