‘ಕೇಳ್ರಪ್ಪೋ ಕೇಳಿ’ ಹಾಡಿಗೆ ನಾಲ್ಕು ಲಕ್ಷ ಮೆಚ್ಚುಗೆ – ಸೆಪ್ಟೆಂಬರ್ ನಲ್ಲಿ ‘ವಾಸಂತಿ ನಲಿದಾಗ’ ತೆರೆಗೆ ಬರಲು ಸಿದ್ದ

vasanthi nalidaga kannada movie song Kelrappo Keli

‘ವಾಸಂತಿ ನಲಿದಾಗ’ ಹೀಗೊಂದು ವಿಭಿನ್ನ ಶೀರ್ಷಿಕೆ ಹೊತ್ತ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿ ನಿಂತಿದೆ. ಟೈಟಲ್ ಕೇಳಿ ಇದೊಂದು ಕಾಮಿಡಿ ಜಾನರ್ ಸಿನಿಮಾ ಅಂದುಕೊಂಡವರಿಗೆ ಚಿತ್ರತಂಡ ನೀಡುವ ಉತ್ತರ ಪಕ್ಕಾ ಕಾಲೇಜ್ ಯೂತ್ ಲವ್ ಸ್ಟೋರಿ ಸಬ್ಜೆಕ್ಟ್ ಸಿನಿಮಾ ಎಂದು. ಹೀಗೆ ಟೈಟಲ್ ಮೂಲಕವೇ ಸುದ್ದಿಯಲ್ಲಿರುವ ಈ ಚಿತ್ರದ ವೀಡಿಯೋ ಸಾಂಗ್ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾ ಅಂಗಳದಲ್ಲಿ ಸಖತ್ ಸದ್ದು ಮಾಡುತ್ತಿದೆ.vasanthi nalidaga kannada movie

ಹೌದು, ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯದಲ್ಲೂ ಬ್ಯುಸಿಯಾಗಿದೆ. ಚಿತ್ರದ ಬಹು ನಿರೀಕ್ಷಿತ ಹಾಡಾದ ‘ಕೇಳ್ರಪ್ಪೋ ಕೇಳಿ’ ಹಾಡನ್ನು ಬಿಡುಗಡೆ ಮಾಡಿ ಗಮನ ಸೆಳೆದಿದೆ. ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿರುವ ಈ ಸಾಂಗ್ ಕಾಲೇಜ್ ಹುಡುಗರ ಮನಕದ್ದಿದ್ದು ನಾಲ್ಕು ಲಕ್ಷಕ್ಕೂ ಹೆಚ್ಚಿನ ವೀವ್ಸ್ ಪಡೆದುಕೊಂಡಿದೆ. ಗೌಸ್ ಫೀರ್ ಸಾಹಿತ್ಯ ಕೃಷಿಯಲ್ಲಿ ಅರಳಿದ ಈ ಹಾಡಿಗೆ ಶ್ರೀ ಗುರು ಅವರ ಸಂಗೀತ ನಿರ್ದೇಶನವಿದೆ. ಸ್ಟಾರ್ ಸಿಂಗರ್ ಶಶಾಂಕ್ ಶೇಷಗಿರಿ, ಪ್ರಿಯಾಂಕ ಶ್ರೀಗುರು, ಶ್ರೀಗುರು ಹಾಡಿಗೆ ದನಿಯಾಗಿದ್ದಾರೆ.vasanthi nalidaga kannada movie

ನವ ಪ್ರತಿಭೆಗಳೇ ತುಂಬಿರುವ ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ರೋಹಿತ್ ಶ್ರೀಧರ್, ಭಾವನ ಶ್ರೀನಿವಾಸ್, ಜೀವಿತ ವಸಿಷ್ಠ ನಟಿಸಿದ್ದಾರೆ. ಜೇನುಗೂಡು ಬ್ಯಾನರ್ ನಡಿ ಸಿನಿಮಾ ನಿರ್ಮಾಣವಾಗಿದ್ದು, ಜೇನುಗೂಡು ಕೆ.ಎನ್ ಶ್ರೀಧರ್ ಬಂಡವಾಳ ಹೂಡಿದ್ದು, ರವೀಂದ್ರ ವಂಶಿ ಆಕ್ಷನ್ ಕಟ್ ಹೇಳಿದ್ದಾರೆ. ರವೀಂದ್ರ ವಂಶಿ ಈ ಹಿಂದೆ ಪುಟಾಣಿ ಸಫಾರಿ, ವರ್ಣಮಯ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ರೋಮ್ಯಾಂಟಿಕ್ ಕಥಾಹಂದರ, ಕಾಲೇಜ್ ಯೂತ್ ಲವ್ ಸ್ಟೋರಿ ಒಳಗೊಂಡ ಸಬ್ಜೆಕ್ಟ್ ಹೊತ್ತು ಹೊಸ ಪ್ರತಿಭೆಗಳೊಂದಿಗೆ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ.vasanthi nalidaga kannada movie

ಚಿತ್ರದ ಹಾಡುಗಳಿಗೆ ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ಗೌಸ್ ಫೀರ್ ಸಾಹಿತ್ಯವಿದೆ. ಸಿ.ರವಿಚಂದ್ರನ್ ಸಂಕಲನ, ಪ್ರಮೋದ್ ಭಾರತೀಯ ಛಾಯಾಗ್ರಾಹಣ ಚಿತ್ರಕ್ಕಿದೆ. ಸಾಯಿಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಂಜು ಪಾವಗಡ, ಮಿಮಿಕ್ರಿ ಗೋಪಿ ಒಳಗೊಂಡ ಅನುಭವಿ ಹಾಗೂ ಕಲರ್ ಫುಲ್ ಕಲಾವಿದರ ದಂಡು ಚಿತ್ರದಲ್ಲಿದೆ. ಸೆಪ್ಟೆಂಬರ್ ಎರಡನೇ ವಾರದಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.vasanthi nalidaga kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…