ವಸಿಷ್ಠ ಸಿಂಹ ಅಭಿನಯದ ‘ಲವ್ ಲಿ’ ಸಿನಿಮಾ ಸೆರೆ ಹಿಡಿಯಲು ಕಡಲ ತೀರದಲ್ಲಿ ಕೋಟಿ ವೆಚ್ಚದ ಸೆಟ್

Vasishtha Simha's film 'Love Li'

ವಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾ ಸೆಟ್ಟೇರಿದ ದಿನದಿಂದ ಸ್ಯಾಂಡಲ್ ವುಡ್ ಅಂಗಳದಲ್ಲಿ ಸಿನಿ ಪ್ರೇಕ್ಷಕರ ಗಮನ ಸೆಳೆಯುತ್ತಲೇ ಇದೆ. ಸಿಲಿಕಾನ್ ಸಿಟಿಯಲ್ಲಿ ಮೊದಲ ಹಾಗೂ ಎರಡನೇ ಶೆಡ್ಯೂಲ್ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮಲ್ಪೆಯ ಪಡುಕರೆಯಲ್ಲಿ ಮೂರನೇ ಹಂತದ ಚಿತ್ರೀಕರಣದಲ್ಲಿ ತೊಡಗಿದೆ.Vasishtha Simha's film 'Love Li'

‘ಲವ್ ಲಿ’ ಚಿತ್ರೀಕರಣಕ್ಕೆಂದೇ ಪಡುಕರೆಯ ಕಡಲ ತೀರದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಕೇವಲ 25 ದಿನದಲ್ಲಿ ಈ ಮನೆ ನಿರ್ಮಾಣ ಮಾಡಲಾಗಿದ್ದು, ಕಳೆದ ಹತ್ತು ದಿನಗಳಿಂದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ವಸಿಷ್ಠ ಸಿಂಹ, ಸಾಧುಕೋಕಿಲ, ನಾಯಕಿ ಸ್ಟೆಫಿ ಪಟೇಲ್ ಸೇರಿದಂತೆ ಹಲವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.Vasishtha Simha's film 'Love Li'

ನಟ ವಸಿಷ್ಠ ಸಿಂಹ ಮಾತನಾಡಿ ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾ. ರೌಡಿಸಂ ಕಥಾಹಂದರ ಕೂಡ ಇದೆ. ನೈಜ ಘಟನೆಯಿಂದ ಸ್ಪೂರ್ತಿ ಪಡೆದು ಅದನ್ನು ಸಿನಿಮೀಯ ರೀತಿಯಲ್ಲಿ ಹೇಳ ಹೊರಟಿದ್ದೇವೆ. ಎಂಟರಿಂದ ಹತ್ತು ಭಾವನೆಗಳನ್ನು ಒಮ್ಮೆಲೆ ಕ್ಯಾರಿ ಮಾಡುವ ಅವಕಾಶ ಈ ಚಿತ್ರದಲ್ಲಿ ಸಿಕ್ಕಿದೆ. ಪಾತ್ರಕ್ಕೆ ಜೀವ ತುಂಬುವ ಕೆಲಸ ನಡೆಯುತ್ತಿದೆ. ಈ ಸಿನಿಮಾ ಸಿನಿ ಪ್ರಿಯರ ಮನಸ್ಸು ಗೆಲ್ಲುವುದರಲ್ಲಿ ಮರು ಮಾತಿಲ್ಲ ಎಂದು ತಿಳಿಸಿದ್ರು.Vasishtha Simha's film 'Love Li'

ನಿರ್ದೇಶಕ ಚೇತನ್ ಕೇಶವ್ ಮಾತನಾಡಿ 7 ದಿನಗಳ ಚಿತ್ರೀಕರಣ ನಡೆಸಿದ್ರೆ ಶೇಕಡಾ 80ರಷ್ಟು ಚಿತ್ರೀಕರಣ ಪೂರ್ಣಗೊಳ್ಳಲಿದೆ. ಲಂಡನ್ ನಲ್ಲೂ ಚಿತ್ರೀಕರಣ ಮಾಡಬೇಕಿದೆ. ಜನವರಿ ಮೊದಲ ವಾರದಲ್ಲಿ ಚಿತ್ರತಂಡ ಲಂಡನ್ ಗೆ ತೆರಳಲಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.Vasishtha Simha's film 'Love Li'

‘ಲವ್ ಲಿ’ ಚಿತ್ರವನ್ನು ಚೇತನ್ ಕೇಶವ್ ನಿರ್ದೇಶನ ಮಾಡುತ್ತಿದ್ದು, ವಸಿಷ್ಠ ಸಿಂಹಗೆ ನಾಯಕಿಯಾಗಿ ಜಾರ್ಕಂಡ್ ಮೂಲದ ಸ್ಟೆಫಿ ಪಟೇಲ್ ನಟಿಸುತ್ತಿದ್ದಾರೆ. ಸುಬ್ಬಲಕ್ಷ್ಮಿ ಸಂಸಾರ ಸೀರಿಯಲ್ ಖ್ಯಾತಿಯ ಸಮೀಕ್ಷಾ ಚಿತ್ರದಲ್ಲಿ ಪ್ರಮುಖ ರೋಲ್ ನಲ್ಲಿ ಮಿಂಚಲಿದ್ದಾರೆ. ಮಾಸ್ಟರ್ ಆನಂದ್ ಪುತ್ರಿ ವಂಶಿಕಾ, ಸಾಧುಕೋಕಿಲ, ದತ್ತಣ್ಣ, ಮಾಳವಿಕಾ, ಶೋಭ್ ರಾಜ್, ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ. ಲವ್ ಲಿ ಚಿತ್ರವನ್ನು ರವೀಂದ್ರ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…