“ವಸುಂಧರದೇವಿ” ಚಿತ್ರದ ಟೀಸರ್ ಗೆ ಮೆಚ್ಚುಗೆಯ ಮಹಾಪೂರ.

vasundhara devi teaser

ಧರ್ಮ ಕೀರ್ತಿರಾಜ್ ಹಾಗೂ ಸೋನುಗೌಡ ನಾಯಕ – ನಾಯಕಿಯಾಗಿ ನಟಿಸಿರುವ “ವಸುಂಧರದೇವಿ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಸಂತೋಷವನ್ನು ಚಿತ್ರತಂಡ ಮಾಧ್ಯಮದ ಮುಂದೆ ಹಂಚಿಕೊಂಡರು. ಇದು ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಧರ್ಮ ಕೀರ್ತಿರಾಜ್ ಅವರೊಡನೆ ಇದು ಎರಡನೇ ಚಿತ್ರ.VASUNDHARADEVI Official Teaser

“ವಸುಂಧರದೇವಿ” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಮುಖ್ಯಮಂತ್ರಿಗಳ ಮಗಳೊಬ್ಬಳು ತಾನು ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿಂದ ಮುಖ್ಯಮಂತ್ರಿ ಆಗುತ್ತಾಳೆ. ನಂತರ ಆಕೆಯ ಕೊಲೆಯಾಗುತ್ತದೆ. ಆ ಕೊಲೆ ಮಾಡಿದ್ದು ಯಾರು? ಎಂದು ಕಂಡು ಹಿಡಿಯಲು ತನಿಖಾಧಿಕಾರಿ ಬರುತ್ತಾರೆ‌. ಆ ಪಾತ್ರದಲ್ಲಿ(ತನಿಖಾಧಿಕಾರಿ) ಧರ್ಮ ಕೀರ್ತಿರಾಜ್ ಅಭಿನಯಿಸಿದ್ದಾರೆ. “ವಸುಂಧರದೇವಿ” ಪಾತ್ರದಲ್ಲಿ ಸೋನು ಗೌಡ ನಟಿಸಿದ್ದಾರೆ. ಗೋವಿಂದೇ ಗೌಡ, ರೂಪೇಶ್, ಪೂಜಾ, ಸೆವೆನ್ ರಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆಯಿದೆ ಎಂದು ನಿರ್ದೇಶಕ ಮಹೇಶ್ ಚಿನ್ಮಯ್ ತಿಳಿಸಿದರು.VASUNDHARADEVI Official Teaser

ನನ್ನ ಚಿತ್ರಕ್ಕೆ ಹಾರೈಸಲು‌ ಅಪ್ಪ- ಅಮ್ಮ ಬಂದಿದ್ದಾರೆ. ಅವರಿಗೆ ಧನ್ಯವಾದ. ಈ ಹಿಂದೆ ನಟಿಸಿರುವ ಚಿತ್ರಗಳಿಗಿಂತ ಈ ಚಿತ್ರದ ಪಾತ್ರ ವಿಭಿನ್ನವಾಗಿದೆ. ನನ್ನ ಹೇರ್ ಸ್ಟೈಲ್ ಕೂಡ ಈ ಚಿತ್ರಕ್ಕಾಗಿ ಬದಲಿಸಿಕೊಂಡಿದ್ದೀನಿ. ಮಹೇಶ್ ಒಂದೊಳ್ಳೆಯ ಚಿತ್ರ ನಿರ್ದೇಶನ ಮಾಡಿದ್ದಾರೆ. ಅಶೋಕ್ ನಿರ್ಮಾಣ ಮಾಡಿದ್ದಾರೆ. ಸೋನು ಗೌಡ ಸೇರಿದಂತೆ ಎಲ್ಲಾ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಧರ್ಮ.VASUNDHARADEVI Official Teaser

ನಾನು‌ ಶಾಲಾ ದಿನಗಳಲ್ಲಿ ಮೈಕ್ ಮುಂದೆ ಮಾತನಾಡುವ ಪ್ರಸಂಗ ಬಂದರೆ ಹಿಂದೆ ಹೋಗುತ್ತಿದೆ. ಈಗ ಧೈರ್ಯ ಬಂದಿದೆ. ಇದೇ ಮೊದಲು ಮಾತನಾಡುತ್ತಿದ್ದೇನೆ. ಮಹೇಶ್ ಅವರು ಹೇಳಿದ್ದ ಕಥೆ ಇಷ್ಟವಾಯಿತು. ಧರ್ಮ ಕೀರ್ತಿರಾಜ್ ಅವರೆ ನಾಯಕರಾಗಲಿ ಎಂದೆ. ನಿರ್ಮಾಣದ ಜೊತೆಗೆ ಚಿತ್ರದಲ್ಲಿ ಒಂದು ಪಾತ್ರವನ್ನು ಮಾಡಿದ್ದೀನಿ ಎನ್ನುತ್ತಾರೆ ನಿರ್ಮಾಪಕ ಅಶೋಕ್ ಕವೇಟಿ.

ಈ ಚಿತ್ರದಲ್ಲಿ‌ ಹಾಡಿಲ್ಲ. ರೀರೆಕಾರ್ಡಿಂಗ್ ಅದ್ಭುತವಾಗಿದೆ ಎಂದರು ಸಂಗೀತ ನಿರ್ದೇಶಕ ವಿನು ಮನಸು.. ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನೀವೆಲ್ಲಾ ಪ್ರೋತ್ಸಾಹ ನೀಡುತ್ತಾ ಬಂದಿದ್ದೀರಿ.‌ ಈಗ ನನ್ನ ಮಗನಿಗೂ ನಿಮ್ಮಿಂದ ಆದೇ ಪ್ರೋತ್ಸಾಹ ಸಿಗುತ್ತಿದೆ. “ವಸುಂಧರದೇವಿ” ಚಿತ್ರದ ಟೀಸರ್ ಚೆನ್ನಾಗಿದೆ. ಚಿತ್ರ ಯಶಸ್ಸು ಕಾಣಲಿ ಎಂದರು ಹಿರಿಯ ನಟ ಕೀರ್ತಿರಾಜ್. ಕಲಾವಿದ ಸೆವೆನ್ ‌ರಾಜ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…