‘ವೆಟ್ಟೈಯಾನ್’ ಆಟಕ್ಕೆ ಮುಹೂರ್ತ ಫಿಕ್ಸ್..ಅಕ್ಟೋಬರ್ ನಲ್ಲಿ ಬಿಡುಗಡೆಯಾಗ್ತಿದೆ‌ ರಜನಿ ಸಿನಿಮಾ

'Vettaiyaan' movie is releasing in October.

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ವೆಟ್ಟೈಯಾನ್. ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ವೆಟ್ಟೈಯಾನ್ ಸಿನಿಮಾ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ.‘Vettaiyaan’ movie is releasing in October.

ಸೂರ್ಯ ನಟಿಸಿದ ‘ಜೈ ಭೀಮ್’ ಸಿನಿಮಾ ನಿರ್ದೇಶಿಸಿದ್ದ ಟಿ.ಎಸ್. ಜ್ಞಾನವೇಲ್ ‘ವೆಟ್ಟೈಯಾನ್’ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಾಗೋದಿಕ್ಕೆ ಮತ್ತೊಂದು ಕಾರಣ ತಲೈವಾ ಹಾಗೂ ಬಿಗ್ ಬಿ ಸಂಗಮ.

ಭಾರತೀಯ ಚಿತ್ರರಂಗದ ದಿಗ್ಗಜರಾದ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ವೆಟ್ಟೈಯಾನ್ ಸಿನಿಮಾ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.Vettaiyaan movie is releasing in October 1

‘ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಲಿದ್ದಾರೆ. ಹೀಗಾಗಿಯೇ ಇದು ಬಹು ತಾರಾಗಣದ ಚಿತ್ರವಾಗಲಿದೆ.

ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ. ತಿರುವನಂತಪುರಂ, ತಿರುನೆಲ್ವೇಲಿ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಚಿತ್ರೀಕರಣ‌ ನಡೆಸಲಾಗಿದೆ.'Vettaiyaan' movie is releasing in October.

ಇಂಡಿಯನ್, ಖೈದಿ ನಂಬರ್ 150, ರೋಬೋ 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಪ್ರೊಡಕ್ಷನ್ ವೆಟ್ಟೈಯಾನ್ ಸಿನಿಮಾ ನಿರ್ಮಿಸುತ್ತಿದೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…