ವಿಭಿನ್ನ ಕಥಾಹಂದರ ಹೊಂದಿರುವ “ಕ್ರೀಂ” ಚಿತ್ರ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ .

Victory of "Gurudev Hoysala".

ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ಅಭಿಷೇಕ್ ಬಸಂತ್ ನಿರ್ದೇಶನದಲ್ಲಿ ಮೂಡಿಬಂದಿರುವ ಮಹಿಳಾಪ್ರಧಾನ ಚಿತ್ರ “ಕ್ರೀಂ”. ಸಂಯುಕ್ತ ಹೆಗಡೆ ಈ ಚಿತ್ರದ ನಾಯಕಿಯಾಗಿದ್ದು, ಅಚ್ಯುತಕುಮಾರ್, ಅರುಣಸಾಗರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಡಿ.ಕೆ. ದೇವೇಂದ್ರ ನಿರ್ಮಾಣ ಮಾಡಿದ್ದಾರೆ.Victory of "Gurudev Hoysala".

ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ” ಕ್ರೀಂ” ಚಿತ್ರದ ಕುರಿತು ಮಾತನಾಡಿದರು.

ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಈ ಸಿನಿಮಾ ಮಾಡಲು ನನಗೆ ರೋಷನ್‌ ಅವರು ಸೇರಿದಂತೆ ಸಾಕಷ್ಟು ಜನ ಸಹಕಾರ ನೀಡಿದ್ದಾರೆ. ಅಗ್ನಿ ಶ್ರೀಧರ್ ಅವರು ಈ ಚಿತ್ರದ ಕಥೆ ಬರೆದಿದ್ದಾರೆ. ಮುಖ್ಯವಾಗಿ ಕಥೆ ಬರೆದಿರುವವರಿಗೆ ನಿರ್ದೇಶನ ಇಷ್ಟವಾಗಬೇಕು. ಆ ನಿಟ್ಟಿನಲ್ಲಿ ನಾನು ಗೆದ್ದಿದ್ದೇನೆ ಅಂದುಕೊಳ್ಳಬಹುದು. ಇನ್ನು ಚಿತ್ರ ಉತ್ತಮವಾಗಿ ಮೂಡಿಬರಲು ಎಲ್ಲವನ್ನು ಒದಗಿಸುತ್ತಿರುವ ನಿರ್ಮಾಪಕ ದೇವೇಂದ್ರ ಅವರಿಗೆ ಧನ್ಯವಾದ. ನಮ್ಮ ಚಿತ್ರಕ್ಕೆ ಸಂಯುಕ್ತ ಹೆಗಡೆ ಅವರನ್ನು ಬಿಟ್ಟು ಬೇರೆ ಯಾರನ್ನೂ ನಾಯಕಿಯ ಪಾತ್ರಕ್ಕೆ ಕಲ್ಪನೆ ಮಾಡಿಕೊಳ್ಳಲು ಸಾಧ್ಯವಿಲ್ಲ, ಚಿತ್ರಕ್ಕಾಗಿ ಅವರು ಪಟ್ಟಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ಸಾಹಸ ದೃಶ್ಯದಲ್ಲಿ ಅಭಿನಯಿಸುವಾಗ ಅವರ ಕಾಲಿಗೆ ಬಿದ್ದ ಪೆಟ್ಟಿನಿಂದ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೆ ಆಯಿತು. ಆನಂತರ ಕೂಡ ಅವರು ಮೊದಲಿನ ಹುಮ್ಮಸಿನಿಂದಲೇ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸದ್ಯ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ ಎಂದರು ನಿರ್ದೇಶಕ ಅಭಿಷೇಕ್ ಬಸಂತ್.Victory of "Gurudev Hoysala".

“ಕ್ರೀಂ” ಎಂದರೆ ಕಾಳಿ ಮಾತೆಯನ್ನು ಆರಾಧಿಸುವ ಬೀಜಾಕ್ಷರಿ ಮಂತ್ರ.
ದೇಶದಲ್ಲಿ ಪ್ರತಿ ತಿಂಗಳು ೪೦೦ಕ್ಕೂ ಹೆಚ್ಚು ಮಹಿಳೆಯರ ಹತ್ಯೆಯಾಗುತ್ತಿದೆ. ಜೊತೆಗೆ ಮಕ್ಕಳೂ ಕಣ್ಮರೆಯಾಗುತ್ತಿದ್ದಾರೆ, ಈ ಪ್ರಕರಣಗಳ ಹಿಂದೆ ಯಾರಿದ್ದಾರೆ? ಯಾಕೆ ಮಾಡುತ್ತಿದ್ದಾರೆ? ಎನ್ನುವ ಅಂಶವನ್ನಿಟ್ಟುಕೊಂಡು ಕಥೆ ಬರೆದಿದ್ದೇನೆ. ಸಂಯುಕ್ತ ಹೆಗಡೆ ಅವರದು ಇದರಲ್ಲಿ ವೇಶ್ಯೆಯ ಪಾತ್ರ. ಈ ಚಿತ್ರದ ಬಗ್ಗೆ ಕೂಡ ಕೆಲವು ವಿವಾದಗಳು ಬರಬಹುದು. ಎದುರಿಸಲು ನಾನು ಸಿದ್ದನಿದ್ದೇನೆ ಎಂದರು ಚಿತ್ರಕ್ಕೆ ಕಥೆ ಹಾಗೂ ಸಂಭಾಷಣೆ ಬರೆದಿರುವ ಅಗ್ನಿ ಶ್ರೀಧರ್.WhatsApp Image 2023 04 20 at 3.26.43 PM

ಈ ಸಿನಿಮಾಗಾಗಿ ನಾನು 2೦೦ ಪರ್ಸೆಂಟ್ ಎಫರ್ಟ್ ಹಾಕಿದ್ದೇನೆ. ಚಿತ್ರೀಕರಣ ಸಮಯದಲ್ಲಿ ಕಾಲಿಗೆ ತೀವ್ರವಾದ ಪೆಟ್ಟಾಯಿತು. ನಾನು ಎರಡು ತಿಂಗಳು ಮನೆಯಲ್ಲೇ ಇದ್ದು, ವಿಶ್ರಾಂತಿ ಪಡೆದಿದ್ದು ಇದೇ ಮೊದಲ ಬಾರಿ. ಫಿಸಿಯೋ ಥೆರಪಿ ಮಾಡಿಸಿಕೊಳ್ಳಬೇಕಾದರೆ ನಾನು ಪಟ್ಟ ನೋವು ಅಷ್ಟಿಷ್ಟಲ್ಲ. ಈ ಚಿತ್ರಕ್ಕಾಗಿ ನಾನು ಬೆವರು ಮಾತ್ರ ಹರಿಸಿಲ್ಲ. ರಕ್ತವನ್ನು ಹರಿಸಿದ್ದೇನೆ. ಇಷ್ಟೆಲ್ಲ ಶ್ರಮಪಟ್ಟರು ಒಂದೊಳ್ಳೆಯ ಸಿನಿಮಾದಲ್ಲಿ ನಟಿಸಿದ ತೃಪ್ತಿಯಿದೆ ಎಂದರು ನಾಯಕಿ ಸಂಯುಕ್ತ ಹೆಗಡೆ.Victory of "Gurudev Hoysala".

ಚಿತ್ರ ಚೆನ್ನಾಗಿ ಬರಲು ಸಹಕಾರ ನೀಡುತ್ತಿರುವ ಚಿತ್ರತಂಡದ ಸದಸ್ಯರಿಗೆ ನಿರ್ಮಾಪಕ ದೇವೇಂದ್ರ ಧನ್ಯವಾದ ತಿಳಿಸಿದರು. ನಟ ರೋಷನ್ ಸಹ “ಕ್ರೀಂ” ಚಿತ್ರದ ಕುರಿತಂತೆ ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…