ವಿಕ್ಟರಿ ವೆಂಕಟೇಶ್ ‘ಸೈಂಧವ್’ ಬಳಗ ಸೇರಿದ ಮತ್ತೊಬ್ಬ ಸ್ಟಾರ್.. ತಮಿಳು ನಟ ಆರ್ಯ ಫಸ್ಟ್ ಲುಕ್ ರಿಲೀಸ್

Victory Venkatesh is another star who joined 'Saindhav' team..Tamil actor Arya first look release

ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಇತ್ತೀಚೆಗೆಷ್ಟೇ ಮುಕ್ತಾಯಗೊಂಡಿತ್ತು. 18 ದಿನದ ಕಾಲ ನಡೆದ ಕ್ಲೈಮ್ಯಾಕ್ಸ್ ಶೂಟಿಂಗ್ ನಲ್ಲಿ 8 ಪ್ರಮುಖ ಸ್ಟಾರ್ ಭಾಗಿಯಾಗಿದ್ದು, ದಕ್ಷಿಣ ಚಿತ್ರರಂಗದ ಖ್ಯಾತ ಸ್ಟಂಟ್ ಮಾಸ್ಟರ್ಸ್ ರಾಮ ಲಕ್ಷ್ಮಣ ಸಾಹಸ ನಿರ್ದೇಶನ ಮಾಡಿದ್ದಾರೆ.

ಸ್ವಾತಂತ್ರ್ಯ ದಿನದ ಅಂಗವಾಗಿ 8 ಸ್ಟಾರ್ಸ್ ಒಳಗೊಂಡ ಸಣ್ಣ ವಿಡಿಯೋ ಝಲಕ್ ನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಇದೀಗ ಸೈಂಧವ್ ಚಿತ್ರತಂಡದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಮತ್ತೊಬ್ಬ ಸ್ಟಾರ್ ನಟ ವಿಕ್ಟರಿ ವೆಂಕಟೇಶ್ ಸಿನಿಮಾ ಬಳಗ ಸೇರಿಕೊಂಡಿದ್ದಾರೆ. ತಮಿಳುನಟ ಆರ್ಯ ಸೈಂಧವ್ ಭಾಗವಾಗಿದ್ದಾರೆ. ಅವ್ರ ಫಸ್ಟ್ ಲುಕ್ ಅನಾವರಣಗೊಂಡಿದ್ದು, ಉದ್ದವಾದ ಕೂಲು ಬಿಟ್ಟು ಸ್ಟೈಲೀಶ್ ಲುಕ್ ನಲ್ಲಿ ಮಿಂಚಿರುವ ಆರ್ಯ ಕೈಯಲ್ಲಿ ಗನ್ ಹಿಡಿದು ಹೆಜ್ಜೆ ಹಾಕ್ತಿರುವ ಪೋಸ್ಟರ್ ನೋಡುಗರನ್ನು ಇಂಪ್ರೆಸ್ ಮಾಡುತ್ತಿದೆ.Victory Venkatesh is another star who joined 'Saindhav' team..Tamil actor Arya first look release

ನಿಹಾರಿಕಾ ಎಂಟರ್ ಟೈನ್ಮೆಂಟ್ ನಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಸಿನಿಮಾದಲ್ಲಿ ಶ್ರದ್ದಾ ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಡಾ ರೇಣು ಪಾತ್ರದಲ್ಲಿ ರುಹಾನಿ ಶರ್ಮಾ ಮತ್ತು ಜಾಸ್ಮಿನ್ ಪಾತ್ರದಲ್ಲಿ ಆಂಡ್ರಿಯಾ ಜೆರೆಮಿಯಾ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಈ ಚಿತ್ರದ ಮೂಲಕ ಸೌತ್ ಸಿನಿರಂಗ ಪ್ರವೇಶಿಸಿದ್ದಾರೆ.

ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರುವ ಸೈಂಧವ್ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಪಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸೈಂಧವ್ ಸಿನಿಮಾವನ್ನು ಡಿಸೆಂಬರ್ 22 ರಂದು ಕ್ರಿಸ್ಮಸ್ ವಿಶ್ವಾದ್ಯಂತ ಚಿತ್ರ ಬಿಡುಗಡೆಯಾಗಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…