ವಿದ್ಯಾರ್ಥಿಗಳಿಂದ ಚಂದನ್ ಶೆಟ್ಟಿ ಸಿನಿಮಾ ಶೀರ್ಷಿಕೆ ಅನಾವರಣ!

``vidyarthi vidhyartiniyare'' Chandan Shetty

ರ್ಯಾಪರ್ ಚಂದನ್ ಶೆಟ್ಟಿ vidyarthi vidhyartiniyare ಸಿನಿಮಾ ನಾಯಕನಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಇಂಥಾದ್ದೊಂದು ಸುಳಿವನ್ನು ಕೆಲ ದಿನಗಳ ಹಿಂದೆ ಚಿತ್ರತಂಡವೇ ಬಿಟ್ಟುಕೊಟ್ಟಿತ್ತು. ಒಂದು ಪ್ರೋಮೋ ಮೂಲಕ ಕುತುಹಲವನ್ನು ಕಾಯ್ದಿಟ್ಟುಕೊಳ್ಳುವ ಪ್ರಯತ್ನವನ್ನೂ ಮಾಡಲಾಗಿತ್ತು. ಕಡೆಗೂ ಆ ಸಿನಿಮಾ ಟೈಟಲ್ ಬಿಡುಗಡೆಗೊಂಡಿದೆ. ಇದೊಂದು ಕಾಲೇಜಿನ ಸುತ್ತ ಘಟಿಸುವ ಸಿನಿಮಾವಾದ್ದರಿಂದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ `(`vidyarthi vidhyartiniyare” Chandan Shetty ) ಎಂಬ ಶಿರ್ಷಿಕೆಯನ್ನಿಡಲಾಗಿದೆ. ಅದನ್ನು ವಿದ್ಯಾರ್ಥಿಗಳೇ ಬಿಡುಗಡೆಗೊಳಿಸಿ ಸಂಭ್ರಮಿಸಿದ್ದಾರೆ.``vidyarthi vidhyartiniyare'' Chandan Shetty

ಇದು ಯುವ ನಿರ್ದೇಶಕ ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರ. ಈ ಹಿಂದೆ ಶ್ರೀಮುರುಳಿ ನಾಯಕನಾಗಿ ನಟಿಸಿದ್ದ `ಲೂಸ್ ಗಳು’ ಎಂಬ ಚಿತ್ರವನ್ನು ನಿರ್ದೇಶಿಸಿದ್ದವರು ಅರುಣ್. ಅವರೀಗ ಈ ದಿನಮಾನದ ಟ್ರೆಂಡಿಗೆ ತಕ್ಕಂತೆ, ಹೊಸಾ ಬಗೆಯ ಕಥಾನಕದೊಂದಿಗೆ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರವನ್ನು ರೂಪಿಸಲು ಮುಂದಾಗಿದ್ದಾರಂತೆ. ಈ ಶೀರ್ಷಿಕೆಯ ಅನಾವರಣದ ವಿಚಾರದಲ್ಲಿಯೇ ಚಿತ್ರತಂಡ ಒಂದಷ್ಟು ಕ್ರಿಯಾಶೀಲ ನಡೆಯನ್ನು ಅನುಸರಿಸಿದೆ. ರಾಜ್ಯದ ನಾನಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸ್ವತಃ ಈ ಶೀರ್ಷಿಕೆ ಬಿಡುಗಡೆಗೊಳಿಸಿ, ಸಾಮಾಜಿಕ ಜಾಲತಾಣಗಳ ಮೂಲಕ ಅದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.``vidyarthi vidhyartiniyare'' Chandan Shetty

ಕಿರಿಕ್ ಪಾರ್ಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಂಥಾ ಚಿತ್ರಗಳು ದೊಡ್ಡ ಪ್ರಮಾಣದಲ್ಲಿಯೇ ಗೆಲುವು ದಾಖಲಿಸಿದ್ದವು. ಆ ನಂತರ ಒಂದಷ್ಟು ವರ್ಷಗಳ ಕಾಲ ಆ ಶೈಲಿಯ ಸಿನಿಮಾಗಳು ಬಂದಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ, ದೇರ್ ಡೆವಿಲ್ ಮುಸ್ತಫಾದಂಥಾ ಕಾಲೇಜು ಕೇಂದ್ರಿತ ಕಥನಗಳು ಸೂಪರ್ ಹಿಟ್ ಆಗಿವೆ. ಈ ಮೂಲಕ ಆ ಬಗೆಯ ಸಿನಿಮಾಗಳ ಕೊರತೆ ಒಂದು ಮಟ್ಟಿಗೆ ನೀಗಿದಂತಾಗಿದೆ. ಈ ಸಾಲಿನಲ್ಲಿ ದೊಡ್ಡ ಗೆಲುವನ್ನು ತಮ್ಮದಾಗಿಸಿಕೊಳ್ಳುವ ಕನಸು, ಭರವಸೆಯೊಂದಿಗೆ, ಅರುಣ್ ಅಮುಕ್ತ ಸಾರಥ್ಯದಲ್ಲಿ ಈ ತಂಡ ಅಖಾಡಕ್ಕಿಳಿದಿದೆ. ಅಂದಹಾಗೆ, ಈ ಬಗೆಯ ಸಿನಿಮಾಗಳ ಸಾಲಿನಲ್ಲಿ ಭಿನ್ನವಾಗಿ ನಿಲ್ಲುವಂಥಾ ಅನೇಕ ಅಂಶಗಳು ಈ ಚಿತ್ರದಲ್ಲಿರಲಿವೆ ಎಂಬುದು ಚಿತ್ರತಂಡದ ಮಾತು.

ದೃಷ್ಟಿ ಸುಧಾರಿಸಿಕೊಳ್ಳಲು ಈ ಕೆಲವು ಆರೋಗ್ಯಕರ ಆಹಾರ

``vidyarthi vidhyartiniyare'' Chandan Shetty

ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರವನ್ನು ಭಿನ್ನವಾಗಿ ಕಟ್ಟಿಕೊಡಲು ಚಿತ್ರತಂಡ ತಯಾರಾಗಿದೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭಣವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಇನ್ನುಳಿದ ಒಂದಷ್ಟು ಮಹತ್ವದ ಸುದ್ದಿಗಳು ಹಂತ ಹಂತವಾಗಿ ಪ್ರೇಕ್ಷಕರನ್ನು ತಲುಪಿಕೊಳ್ಳಲಿವೆ…

ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…