ಸುಮಧುರವಾಗಿದೆ “ವಿಜಯಾನಂದ” ಚಿತ್ರದ ಹಾಡು..

vijayananda kannada movie songs release

ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಚಿತ್ರ “ವಿಜಯಾನಂದ”.
ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ನೀಡಿರುವ ಈ ಚಿತ್ರದ “ಹಾಗೆ ಆದ ಆಲಿಂಗನ” ಎಂಬ ಹಾಡು ಬಿಡುಗಡೆಯಾಗಿದೆ. ಧನಂಜಯ್ ರಂಜನ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಗೂ ಕೀರ್ತನಾ ವೈದ್ಯನಾಥನ್ ಇಂಪಾಗಿ ಹಾಡಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಯಿತು. ಮಲೆಯಾಳಂನ ಖ್ಯಾತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್, “ಗೀತಾ ಗೋವಿಂದಂ” ಸೇರಿದಂತೆ ಮುನ್ನೂರಕ್ಕೂ ಅಧಿಕ ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದಲ್ಲಿ ಇದು ಮೊದಲ ಚಿತ್ರ. ಇಮ್ರಾನ್ ಸರ್ದಾರಿಯಾ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ.vijayananda kannada movie songs release

ಹಾಡು ಬಿಡುಗಡೆ ಸಮಾರಂಭದಲ್ಲಿ ವಿಜಯ ಸಂಕೇಶ್ವರ ಚಿತ್ರದ ಕುರಿತು ಮಾತನಾಡಿದರು.

ನನ್ನ‌ ಜೀವನಾಧಾರಿತ ಸಿನಿಮಾ ಮಾಡುವುದಾಗಿ ನಿರ್ದೇಶಕಿ ರಿಶಿಕಾ ಶರ್ಮ ಕೇಳಿದಾಗ, ಈ ಚಿಕ್ಕ ಹುಡಗಿ ಏನು ಮಾಡುತ್ತಾಳೆ? ಅನಿಸಿತು. ಆದರೆ ಈಗ, ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಶಿಕಾ ಬಹಳ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ನನ್ನ ಮಗ ಆನಂದ್ ಈ ಚಿತ್ರವನ್ನು ನಿರ್ಮಾಣ‌ ಮಾಡಿದ್ದಾರೆ. ನನ್ನ‌ ಕುಟುಂಬವರೆಲ್ಲಾ ಉದ್ಯಮಿಗಳು. ನಮ್ಮ ತಂದೆಯವರು ಸಹ.‌ ನಾನು ಹದಿನೈದನೇ ವಯಸ್ಸಿಗೆ ಕೆಲಸ ಶುರು ಮಾಡಿದೆ. ನಮ್ಮ‌ ತಂದೆ ಬಳಿ ಹೋಗಿ ಟ್ರಾನ್ಸ್ ಪೋರ್ಟ್ ಬ್ಯುಸಿನೆಸ್ ಶುರು ಮಾಡುತ್ತೇನೆ ಅಂದಾಗ ಅವರು ಗಾಬರಿಯಾದರು. ಅಂದು ಒಂದು ಲಾರಿಯಿಂದ ಆರಂಭವಾದ ನನ್ನ ಉದ್ಯಮ, ಇಂದು ಬೃಹತಾಗಿ ಬೆಳೆದಿದೆ. ಟ್ರಾನ್ಸ್ ಪೋರ್ಟ್ ಹಾಗೂ ಮಾಧ್ಯಮ ಎರಡರಲ್ಲೂ ನಾವು ಮುಂದಿದ್ದೇವೆ. ನನ್ನ ಹಿಂದಿನ ಶಕ್ತಿ ನನ್ನ ಪತ್ನಿ ಲಲಿತಾ ಎಂದರೆ ತಪ್ಪಾಗಲಾರದು. ನನ್ನ ಮಗ ಆನಂದ ಈಗ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾನೆ. ಮೊಮ್ಮಗ ಶಿವ ಸದ್ಯದಲ್ಲೇ ಹೊಸ ಉದ್ಯಮ ಶುರು ಮಾಡಲಿದ್ದಾನೆ. ಈ ಚಿತ್ರ ಮಾಡಬೇಕಾದರೆ ನಾನು ನಿರ್ದೇಶಕರಿಗೆ ಹೇಳಿದ್ದೆ. ನನ್ನ‌ ಜೀವನ ಹೇಗಿತ್ತೊ ಹಾಗೆ ತೋರಿಸಬೇಕು. ಬೇರೆ ಏನು ಸೇರಿಸಬಾರದು ಅಂತ. ನಾನು ಚಿಕ್ಕ ವಯಸ್ಸಿನಲ್ಲಿ ಹೇಗಿದ್ದನೋ, ನಾಯಕ ನಿಹಾಲ್ ಹಾಗೆ ಕಾಣುತ್ತಾರೆ. ಆ ಮೀಸೆ, ಬಣ್ಣಬಣ್ಣದ ಅಂಗಿಗಳು ಎಲ್ಲವು.. ಆ ವಯಸ್ಸಿನಲ್ಲಿ ನಾನು ಹಾಗೆ ಇದೆ. ನಾಯಕಿ ಸಿರಿ ಪ್ರಹ್ಲಾದ್ ಕೂಡ ನನ್ನ ಹೆಂಡತಿಯನ್ನೇ ಹೋಲುತ್ತಾರೆ. ಈ ಚಿತ್ರ ಯುವಕರಿಗೆ ಸ್ಪೂರ್ತಿಯಾಗಲಿ. ಡಿಸೆಂಬರ್ ಒಂಭತ್ತರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲೆಯಾಳಂ ಐದು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹಿಸಿ ಎಂದರು ವಿಜಯ ಸಂಕೇಶ್ವರ.vijayananda kannada movie songs release

ಶರಣ್, ಹರ್ಷಿಕಾ ಪೂಣಚ್ಛ ಅತಿಥಿಗಳಾಗಿ ಆಗಮಿಸಿ‌ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರ ಸಾಗಿ ಬಂದ ಬಗ್ಗೆ ನಿರ್ದೇಶಕಿ ರಿಶಿಕಾ ಶರ್ಮ ಮಾಹಿತಿ ನೀಡಿದರು. ಹಾಡುಗಳ ಬಗ್ಗೆ ಗೋಪಿ ಸುಂದರ್, ಅಭಿನಯದ ಕುರಿತು ನಾಯಕ ನಿಹಾಲ್, ನಾಯಕಿ ಸಿರಿ ಪ್ರಹ್ಲಾದ್, ಭರತ್ ಬೋಪ್ಪಣ್ಣ, ಅರ್ಚನಾ ಕೊಟ್ಟಿಗೆ, ರಾಜೇಶ್ ನಟರಂಗ ಮಾತನಾಡಿದರು.vijayananda kannada movie songs release

ಅನಂತನಾಗ್, ರವಿಚಂದ್ರನ್, ವಿನಯಾಪ್ರಸಾದ್, ಪ್ರಕಾಶ್ ಬೆಳವಾಡಿ, ರಮೇಶ್ ಭಟ್, ಶೈನ್ ಶೆಟ್ಟಿ, ದಯಾಳ್ ಪದ್ಮನಾಭನ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.vijayananda kannada movie songs release

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…