ಕನ್ನಡಕ್ಕೆ ವಿಕ್ರಂ ವೇದ ಮ್ಯೂಸಿಕ್ ಡೈರೆಕ್ಟರ್ ಎಂಟ್ರಿ…ಶಿವಣ್ಣನ ಹೊಸ ಸಿನಿಮಾಗೆ ಟ್ಯೂನ್ ಹಾಕಲಿದ್ದಾರೆ ಸ್ಯಾಮ್ ಸಿ.ಎಸ್

Vikram Veda music director entry in Kannada...Sam C.S. will tune for Shivanna's new movie.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಸಾಲು ಸಾಲು ಸಿನಿಮಾಗಳು ಘೋಷಣೆಯಾಗಿವೆ. ಏಕಕಾಲಕ್ಕೆ ಹತ್ತಕ್ಕೂ ಹೆಚ್ಚು ಚಿತ್ರಗಳು ಅನೌನ್ಸ್ ಆಗಿವೆ. ಈ ಪೈಕಿ ಶಿವಣ್ಣ SCFC01 ಎಂಬ ತಾತ್ಕಾಲಿಕ ಶೀರ್ಷಿಕೆಯಡಿ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ‌. ಈ ಚಿತ್ರದ ಮೂಲಕ ಖ್ಯಾತ ಸಂಗೀತ ನಿರ್ದೇಶಕರಾದ ಸ್ಯಾಮ್ ಸಿ.ಎಸ್ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

Vikram Veda music director entry in Kannada...Sam C.S. will tune for Shivanna's new movie.
ವಿಕ್ರಂ ವೇದ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳಿಗೆ ಟ್ಯೂನ್ ಹಾಕಿರುವ ಸ್ಯಾಮ್ ಕರುನಾಡ ಚಕ್ರವರ್ತಿ ಶಿವಣ್ಣ ಬಣ್ಣ ಹಚ್ಚಲಿರುವ ಅಪ್ ಕಮ್ಮಿಂಗ್ ಪ್ರಾಜೆಕ್ಟ್ ಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸುಧೀರ್ ಚಂದ್ರ ಪದ್ರಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಕಾರ್ತಿಕ್ ಅದ್ವೈತ್ ನಿರ್ದೇಶನದಲ್ಲಿ ಮಾಡಲಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕನ್ನಡ, ತೆಲುಗು, ಮಲಯಾಳಂ ಹಾಗೂ ತಮಿಳುಭಾಷೆಯಲ್ಲಿ ಬಿಡುಗಡೆಯಾಗಲಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಪ್ರಾಜೆಕ್ಟ್ ಮೂಲಕ ಸ್ಯಾಮ್ ಸಿ ಎಸ್ ಪ್ಯಾನ್ ಇಂಡಿಯಾ ಮ್ಯೂಸಿಕಲ್ ಐಕಾನ್ ಆಗಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…