ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ
ಕಿಚ್ಚ ವರ್ಸ್ ಬಿಡುಗಡೆ

vikrant rona

ಕಿಚ್ಚ ಸುದೀಪ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದೆ. ರಾ ರಾ ರಕ್ಕಮ್ಮ, ಟ್ರೇಲರ್ ವಿಕ್ರಾಂತ್ ರೋಣ ಪ್ರಪಂಚದ ಅಧ್ಬುತ ಲೋಕವನ್ನು ಸಿನಿಪ್ರಿಯರಿಗೆ ಪರಿಚಯಿಸಿದೆ. ಜುಲೈ 28ಕ್ಕೆ ಸಿನಿಮಾ ನೋಡಿ ಕಣ್ತುಂಬಿಕೊಳ್ಳೊದೊಂದು ಬಾಕಿ ಎನ್ನುತ್ತಿದ್ದ ಅಭಿಮಾನಿ ಬಳಗಕ್ಕೆ ಕಿಚ್ಚನ ಅಂಗಳದಿಂದ ಮತ್ತೊಂದು ಸೂಪರ್ ಡೂಪರ್ ಸರ್ಪ್ರೈಸ್ ಸಿಕ್ಕಿದೆ.vikrant rona kiccha verses

ವಿಕ್ರಾಂತ್ ರೋಣ ಸಿನಿಮಾ ಕೂಡ ಮೆಟಾ ವರ್ಸ್ ಲೋಕಕ್ಕೆ ಕಾಲಿಟ್ಟಿದ್ದು. ಎನ್ ಎಫ್ ಟಿ ಸಂಸ್ಥೆ ‘ಕಿಚ್ಚ ವರ್ಸ್’ ಮೂಲಕ ವಿಕ್ರಾಂತ್ ರೋಣವನ್ನು ಪ್ರಸ್ತುತ ಪಡಿಸಲಿದೆ. ಕಿಚ್ಚ ವರ್ಸ್’ ಅನ್ನು ಎನ್ ಎಫ್ ಟಿ ಸಂಸ್ಥೆ ವಿಕ್ರಾಂತ್ ರೋಣ ಚಿತ್ರತಂಡದೊಂದಿಗೆ ಲಾಂಚ್ ಮಾಡಿದೆ. ಎನ್ ಎಫ್ ಟಿ ಸಂಸ್ಥೆ ಸೃಷ್ಟಿಸಿರುವ ಕಿಚ್ಚ ವರ್ಸ್ ಜಗತ್ತು ಕಿಚ್ಚನಿಗೂ ಸಖತ್ ಸರ್ಪ್ರೈಸ್ ಆಗಿದ್ದು ಮೊದಲ ಬಾರಿ ಇದರ ಬಗ್ಗೆ ಕೇಳಿದಾಗ ಹೇಗಿರುತ್ತೋ ಎಂಬ ಕಾಲ್ಪನಿಕ ಲೋಕದಲ್ಲಿದ್ದೆ. ನನಗೂ ಇದು ಅರ್ಥವಾಗಿರಲಿಲ್ಲ. ಆದ್ರೆ ಅದನ್ನು ಸ್ವತಃ ನಾನೇ ನೋಡಿದಾಗ. ಅನುಭವಿಸಿದಾಗ ತುಂಬಾನೇ ಖುಷಿ ಪಟ್ಟೆ. ತುಂಬಾನೇ ಅಧ್ಬುತ ಕೆಲಸವನ್ನು ಈ ತಂಡ ಮಾಡಿದೆ ಖಂಡಿತ ಎಲ್ಲರಿಗೂ ಇಂತಹದ್ದೇ ಒಂದು ಒಳ್ಳೆಯ ಅನುಭವವನ್ನು ಇದು ನೀಡಲಿದೆ ಎಂಬ ಭರವಸೆ ಇದೆ ಎಂದು ನಟ ಕಿಚ್ಚ ಸುದೀಪ ಕಿಚ್ಚ ವರ್ಸ್ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.vikrant rona kiccha verses

ಕಿಚ್ಚ ವರ್ಸ್ ಕಿಚ್ಚನ ಜಗತ್ತಾಗಿದ್ದು ಈ ಲೋಕದಲ್ಲಿ ನೀವು ಕಿಚ್ಚನ ಜೊತೆ ಮಾತನಾಡಬಹುದು, ಅವರ ಜೊತೆ ಸಮಯ ಕಳೆಯಬಹುದು ಹೀಗೆ ನಿಮ್ಮ ನೆಚ್ಚಿನ ನಟನೊಂದಿಗೆ ಕಾಲ ಕಳೆಯಲು ಕಿಚ್ಚ ವರ್ಸ್ ಅವಕಾಶ ಮಾಡಲಿದ್ದು, ಕಿಚ್ಚನ ಅಭಿಮಾನಿಗಳಿಗೆ ಇದು ತುಂಬಾನೇ ಖುಷಿ ಕೊಡಲಿದೆ. ಕಿಚ್ಚ ವರ್ಸ್ ಲೋಕವನ್ನು ಪ್ರವೇಶಿಸಲು ಎನ್ ಎಫ್ ಟಿ ಮೆಂಬರ್ ಶಿಪ್ ಕಾರ್ಡ್ ಪ್ರತಿಯೊಬ್ಬರು ಹೊಂದಿರಬೇಕು ಎಂದು ಕಾಫಿ ಅಂಡ್ ಬನ್ ಇನೋವೇಷನ್ಸ್ ಸಂಸ್ಥೆ ಸ್ಥಾಪಕಿ ಪ್ರಿಯಾ ಸುದೀಪ್ ಕಿಚ್ಚ ವರ್ಸ್ ಬಗ್ಗೆ ತಿಳಿಸಿದ್ದಾರೆ.vikrant rona kiccha verses

ನಿನ್ನೆಯಿಂದ ಎನ್ ಎಫ್ ಟಿ ಸ್ಕೆಚ್ ಕಾಂಪಿಟೇಶನ್ ಆರಂಭವಾಗಿದ್ದು ವಿಕ್ರಾಂತ್ ರೋಣ ಚಿತ್ರದ ಅಧ್ಬುತ ಸ್ಕೆಚ್ ಮಾಡಿದವರಿಗೆ ಎನ್ ಎಫ್ ಟಿ ಮೆಂಬರ್ ಶಿಪ್ ನೀಡಲಾಗುವುದು. ಇದಕ್ಕಾಗಿ ನೀವು ಮಾಡಬೇಕಾಗಿರೋದು ಇಷ್ಟೇ ವಿಕ್ರಾಂತ್ ರೋಣ ಚಿತ್ರದ ಸ್ಕೆಚ್ ಬಿಡಿಸಿ kichchaverse.ioನಲ್ಲಿ ಅಪ್ ಲೋಡ್ ಮಾಡಬೇಕು. ಎನ್ ಎಫ್ ಟಿ ಡ್ರಾಪ್ ಕೂಡ ಜುಲೈ 24ರಿಂದ ನಡೆಯಲಿದೆ. ಹೀಗೆ ಎನ್ ಎಫ್ ಟಿ ಯ ಕಿಚ್ಚ ವರ್ಸ್ ಹಲವಾರು ಇವೆಂಟ್ ಗಳನ್ನು ಹೊಂದಿದ್ದು ಈ ಮೂಲಕ ತಮ್ಮ ನೆಚ್ಚಿನ ನಟನೊಂದಿಗೆ ಆತ್ಮೀಯವಾಗಿ ಕಾಲ ಕಳೆಯಲು ಅವಕಾಶ ಮಾಡಿಕೊಡಲಿದೆ.vikrant rona kiccha verses

ಮತ್ತೊಂದು ಹೆಮ್ಮೆಯ ಸಂಗತಿಯಂದ್ರೆ ಜಗತ್ತಿನಲ್ಲೇ ಮೊದಲ ಬಾರಿ ವಿಕ್ರಾಂತ್ ರೋಣ ಸಿನಿಮಾವನ್ನು ಎನ್ ಎಫ್ ಟಿ ಪ್ರೀಮಿಯರ್ ಶೋ ನಡೆಸುತ್ತಿದೆ. ಹೊರದೇಶಗಳಲ್ಲಿ ಕನ್ನಡ ಸಿನಿಮಾವನ್ನು ಪ್ರೀಮಿಯರ್ ಶೋ ನಡೆಸುತ್ತಿರೋದು ಇದೇ ಮೊದಲು. ಇದು ವಿಕ್ರಾಂತ್ ರೋಣ ಸಿನಿಮಾದ ಹೆಗ್ಗಳಿಕೆ. ಜುಲೈ 27ಕ್ಕೆ ದುಬೈನಲ್ಲಿ ಈ ಪ್ರೀಮಿಯರ್ ಶೋ ನಡೆಯಲಿದೆ. ಇದೆಲ್ಲದಕ್ಕೂ ಎನ್ ಎಫ್ ಟಿ ಮೆಂಬರ್ ಶಿಪ್ ಅಗತ್ಯವಿದೆ ಎಂದು ಕಾಫಿ ಅಂಡ್ ಬನ್ ಇನೋವೇಷನ್ಸ್ ಸಂಸ್ಥೆ ಸಿಇಓ ಜಾಕೀರ್ ಹುಸೇನ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು, ಸುದೀಪ್ ಪತ್ನಿ ಪ್ರಿಯಾ ಸುದೀಪ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…