ನೂತನ ವಾಗಿ ಅನಾವರಣಗೊಂಡ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್ ” ಚಿತ್ರದ ಬಿಡುಗಡೆ ದಿನಾಂಕ

Vinod Prabhakar starrer "Fighter"

ಕನ್ನಡಪರ ಸಂಘಟನೆಗಳ ಹೋರಾಟಗಾರರು, ನಿವೃತ್ತ ನ್ಯಾಯಾಧೀಶರು,ಮಾನವಹಕ್ಕು ಮಹಿಳಾ ಅಧ್ಯಕ್ಷರು,ಅನೇಕ ಚಳುವಳಿ ಹೋರಾಟಗಾರರಿಂದ “ಫೈಟರ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ .

ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ, ನೂತನ್ ಉಮೇಶ್ ನಿರ್ದೇಶನದ ಹಾಗೂ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಫೈಟರ್” (Vinod Prabhakar Fighter) ಚಿತ್ರದ ಬಿಡುಗಡೆ ದಿನಾಂಕ ನೂತನವಾಗಿ ಅನಾವರಣವಾಯಿತು. ಕನ್ನಡಪರ ಸಂಘಟನೆಗಳ ಹೋರಾಟಗಾರರು, ನಿವೃತ್ತ ನ್ಯಾಯಾಧೀಶರು,ಮಾನವಹಕ್ಕು ಮಹಿಳಾ ಅಧ್ಯಕ್ಷರು, ಅನೇಕ ಚಳುವಳಿ ಹೋರಾಟಗಾರರಿಂದ “ಫೈಟರ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಯಿತು. ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ 6 ರಂದು ತೆರೆಗೆ ಬರಲಿದೆ.Vinod Prabhakar Fighter

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಶಿವರಾಮೇ ಗೌಡ, ಕನ್ನಡ ಸೇನೆ ರಾಜ್ಯಾಧ್ಯಕ್ಷರಾದ ಕೆ.ಆರ್ ಕುಮಾರ್, ರಮೇಶ್ ಗೌಡ (ಕಸ್ತೂರಿ ಕರ್ನಾಟಕ ಜನಪ್ರಿಯ ವೇದಿಕೆ), ಕೆ.ಸಿ.ಮೂರ್ತಿ(ಕರ್ನಾಟಕ, ಕನ್ನಡ ರಕ್ಷಣಾ ವೇದಿಕೆ), ವೆಂಕಟ್ ಸ್ವಾಮಿ (ಸಮತಾ ಸೈನಿಕ ದಳ), ಶಿವಾನಂದ ಶೆಟ್ಟಿ(ಕ ರಾ ವೇ ಬೆಂಗಳೂರು), ಭಾರತಿ ನಾಯಕ್(ಹ್ಯೂಮನ್ ರೈಟ್ಸ್ ಮಹಿಳಾ ಅಧ್ಯಕ್ಷರು), ಕೆ.ಕೆ.ಮೋಹನ್ (ನಾಡ ಸೇನಾನಿ ಕೆಂಪೇಗೌಡ ಟ್ರಸ್ಟ್), ಮಲ್ಲಿಕಾರ್ಜುನ, ವಿಜಯಕುಮಾರ್, ಸೋಮಶೇಖರ್, ರವಿಕುಮಾರ್ ಮುಂತಾದ ಗಣ್ಯರು ಸಮಾರಂಭಕ್ಜೆ ಆಗಮಿಸಿ, “ಫೈಟರ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.Vinod Prabhakar Fighter

“ಫೈಟರ್” ಚಿತ್ರದಲ್ಲಿ ನಾನು ರೈತರ ಪರ ಹೋರಾಟಗಾರ ಎಂದು ತಿಳಿಸಿದ ನಾಯಕ ವಿನೋದ್ ಪ್ರಭಾಕರ್ ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರಿಗೂ ನಮಸ್ಕಾರ ತಿಳಿಸಿದರು. ನಿಜವಾದ ಫೈಟರ್ ಗಳೆಂದರೆ ನಮ್ಮ ನಾಡು,ನುಡಿ,ಜಲ, ಸಂಸ್ಕೃತಿ, ದೇಶಕ್ಕಾಗಿ ಹೋರಾಡಿದ ಹೋರಾಟಗಾರರು ಹಾಗಾಗಿ ನಾವು ಈ ನಮ್ಮ ಹೋರಾಟಗಾರರಿಂದ ಬಿಡುಗಡೆ ದಿನಾಂಕ ಘೋಷಣೆ ಮಾಡಲು ತೀರ್ಮಾನಿಸಿದೆವು ಎಂದು ನಿರ್ದೇಶಕ ನೂತನ ಉಮೇಶ್ ಹೇಳಿದರುVinod Prabhakar Fighter

ನಮ್ಮ ಚಿತ್ರ ಅಕ್ಟೋಬರ್ ೬ ರಂದು ಬಿಡುಗಡೆಯಾಗುತ್ತಿದೆ. ಇಷ್ಟು ಜನ ಹೋರಾಟಗಾರರು ಬಂದು ನಮ್ಮ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದು ಸಂತೋಷವಾಗಿದೆ. ಅಕ್ಟೋಬರ್ 6 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ಸೋಮಶೇಖರ್ ಕಟ್ಟಿಗೇನಹಳ್ಳಿ. ನಾಯಕಿ ಲೇಖಾಚಂದ್ರ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…