ವಿಷ್ಣುಪ್ರಿಯನ ರೊಮ್ಯಾಂಟಿಕ್ ಹಾಡಿಗೆ ಪ್ರೇಕ್ಷಕರು ಫಿದಾ!

Vishnupriya's romantic song

ತೊಂಬತ್ತರ ದಶಕದ ಸಮ್ಮೋಹಕ ಪ್ರೇಮ ಕಥಾನಕ ಹೊಂದಿರುವ ಚಿತ್ರ `ವಿಷ್ಣುಪ್ರಿಯ’. ಈ ಹಿಂದೆ ಪಡ್ಡೆಹುಲಿಯಾಗಿ ಭರವಸೆ ಮೂಡಿಸಿದ್ದ ಶ್ರೇಯಸ್ ಮಂಜು ವಿಷ್ಣುಪ್ರಿಯನಾಗಿ, ವಿಶಿಷ್ಟವಾದ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಈ ಚಿತ್ರದ ಚೆಂದದ ಹಾಡೊಂದು ವಾರಗಳ ಹಿಂದೆ ಬಿಡುಗಡೆಗೊಂಡಿತ್ತು. ಇದೀಗ ದಿನದಿಂದ ದಿನಕ್ಕೆ ಆ ಹಾಡು ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಕೇಳಿದಾಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಛಾತಿ ಹೊಂದಿರುವ ಆ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಾ, ಮೆಚ್ಚುಗೆ ಗಳಿಸುತ್ತಾ ಮುಂದುವರೆಯುತ್ತಿದೆ.Vishnupriya's romantic song

ಚಿಗುರು ಚಿಗುರು ಸಮಯ ಹಿತವಾದ ಒಂದು ಮೌನ, ಒಲವು ಚಿಗುರೊ ಸಮಯ ಎದೆ ಬೇರಿನಲ್ಲಿ ಮೌನ… ಎಂಬ ಈ ಹಾಡು ಸಂಗೀತ, ಸಾಹಿತ್ಯ ಹಾಗೂ ದೃಷ್ಯ ಸೇರಿದಂತೆ ಎಲ್ಲ ಕೋನಗಳಲ್ಲಿಯೂ ಸಮ್ಮೋಹಕವಾಗಿದೆ. ಇದಕ್ಕೆ ಸಾಹಿತ್ಯ ಒದಗಿಸಿರುವವರು ಡಾ. ವಿ ನಾಗೇಂದ್ರ ಪ್ರಸಾದ್. ಬಹುಶಃ ಈ ಮೂಲಕ ವರ್ಷಾರಂಭದಲ್ಲಿಯೇ ನವಿರು ಭಾವವೊಂದನ್ನು ನಾಗೇಂದ್ರ ಪ್ರಸಾದ್ ಕೇಳುಗರ ಬೊಗಸೆ ತುಂಬಿಸಿದ್ದಾರೆ. ನಜೀನ್ ಅರ್ಷಾದ್ ಕಂಠಸಿರಿಯಲ್ಲಿ ಈ ಹಾಡು ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಈ ಮೂಲಕ ಕೇರಳದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಕನ್ನಡದಲ್ಲಿಯೂ ಕಮಾಲ್ ಮಾಡಿದ್ದಾರೆ.Vishnupriya's romantic song

ಮತ್ತೆ ಮತ್ತೆ ಕೇಳಿಸಿಕೊಳ್ಳುವ ಗುಣ ಹೊಂದಿರುವ ಈ ಪ್ರೇಮ ಗೀತೆಯ ಪ್ರಭೆಯಲ್ಲಿ ವಿಷ್ಣುಪ್ರಿಯನ ಕ್ರೇಜ್ ಮತ್ತಷ್ಟು ಮಿರುಗುತ್ತಿದೆ. ಈ ವರ್ಷದ ಮೆಲೋಡಿಯಸ್ ಹಾಡೆಂದು ಗುರುತಿಸಿಕೊಳ್ಳುವ ಎಲ್ಲ ಗುಣಗಳೂ ಈ ಚಿಗುರು ಚಿಗುರು ಹಾಡಿಗಿದೆ. ಅಂದಹಾಗೆ, ಇದು ವಿ.ಕೆ ಪ್ರಕಾಶ್ ನಿರ್ದೇಶನದ ಚಿತ್ರ. ತೊಂಬತ್ತರ ದಶಕದಲ್ಲಿ ಘಟಿಸುವ ಈ ಕಥನದಲ್ಲಿ ಶ್ರೇಯಸ್ ಮಂಜು ನಾಯಕನಾಗಿ ನಟಿಸಿದ್ದರೆ, ಒರು ಅಡಾರ್ ಲವ್ ಖ್ಯಾತಿಯ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಈ ಪ್ರೇಮಕಥೆ ಅದೆಷ್ಟು ತಾಜಾತನದಿಂದ ನಳನಳಿಸುತ್ತಿದೆ ಎಂಬುದರ ಸ್ಪಷ್ಟ ಸೂಚನೆಯೊಂದು ಈ ಹಾಡಿನ ಮೂಲಕವೇ ಪ್ರೇಕ್ಷಕರನ್ನು ತಲುಪಿಕೊಂಡಿದೆ.Vishnupriya's romantic song

ಗಂಡುಗಲಿ ಕೆ.ಮಂಜು ನಿರ್ಮಾಣದ ವಿಷ್ಣುಪ್ರಿಯ ಚಿತ್ರದಲ್ಲಿ ಸುಚೇಂದ್ರಪ್ರಸಾದ್, ಅಚ್ಯುತ್ ಕುಮಾರ್ ಮುಂತಾದವರು ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು ಪ್ರೇಮಕಥೆ ಮಾತ್ರವಲ್ಲ; ತೊಂಬತ್ತರ ದಶಕದಲ್ಲಿ ನಡೆದಿದ್ದ ನೈಜ ಕಥನವೂ ಹೌದು. ಈ ಹಿಂದೆ ಮೊದಲ ಚಿತ್ರ ಪಡ್ಡೆಹುಲಿಯಲ್ಲಿ ಮೈದುಂಬಿ ನಟಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದವರು ಶ್ರೇಯಸ್ ಮಂಜು. ಅವರ ಪಾತ್ರದ ಚಹರೆಗಳು ಈ ಹಾಡಿನ ಮೂಲಕ ಜಾಹೀರಾಗಿದೆ. ಈ ಹಾಡು ಕೇಳಿದವರು, ನೋಡಿದವರೆಲ್ಲ ವಿಷ್ಣುಪ್ರಿಯನನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ…Vishnupriya's romantic song

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…