ನವೆಂಬರ್ 19ರಂದು ಅರಬ್ಬರ ನಾಡಲ್ಲಿ ‘ವಿಶ್ವ ಕನ್ನಡ ಹಬ್ಬ’ – ದುಬೈನಲ್ಲಿ ಪಸರಿಸಲಿದೆ ಕನ್ನಡದ ಕಂಪು

vishwa kannada habba dubai

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಹಾಗೂ ಕನ್ನಡಿಗರು ದುಬಾಯಿ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ದುಬೈನಲ್ಲಿ ‘ವಿಶ್ವ ಕನ್ನಡ ಹಬ್ಬ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನವೆಂಬರ್ 19ರಂದು ದುಬೈನ ಶೇಕ್ ರಶೀದ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈಗಾಗಲೇ ಈ ಬಾರಿಯ ‘ವಿಶ್ವ ಕನ್ನಡ ಹಬ್ಬ’ದ ಲೋಗೋ ಬಿಡುಗಡೆಯಾಗಿದ್ದು ಕಾರ್ಯಕ್ರಮದ ಸಿದ್ದತೆಯೂ ಭರದಿಂದ ನಡೆಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಟಿ. ಶಿವಕುಮಾರ ನಾಗರ ನವಿಲೆ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ರು. ಪತ್ರಿಕಾಗೋಷ್ಠಿಯಲ್ಲಿ ನಟಿ ಪ್ರೇಮ, ನಟ ವಸಿಷ್ಠ ಸಿಂಹ ಹಾಗೂ ಇತರರು ಪಾಲ್ಗೊಂಡಿದ್ರು.vishwa kannada habba dubai

ನವೆಂಬರ್ 19ರಂದು ದುಬೈನಲ್ಲಿ ನಡೆಯುವ ‘ವಿಶ್ವ ಕನ್ನಡ ಹಬ್ಬ’ ವಿಶೇಷ ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜರಾದ ಯಧುವೀರ ಚಾಮರಾಜ ಒಡೆಯರ್, ನಟ ಶಿವರಾಜ್ ಕುಮಾರ್, ಮಹರ್ಷಿ ಡಾ.ಆನಂದ್ ಗುರೂಜಿ, ನಟಿಯರಾದ ಭವ್ಯ, ಸುಧಾರಾಣಿ, ಶೃತಿ, ಪ್ರೇಮಾ, ಮೇಘ ಶೆಟ್ಟಿ ವಿಜಯ ರಾಘವೇಂದ್ರ ಹಾಗೂ ಮುಖ್ಯ ಅತಿಥಿಯಾಗಿ ನಟ ವಸಿಷ್ಠ ಸಿಂಹ ಪಾಲ್ಗೊಳ್ಳುತ್ತಿದ್ದಾರೆ.vishwa kannada habba dubai

ನಟ ವಸಿಷ್ಠ ಸಿಂಹ ಮಾತನಾಡಿ ನಾವೆಲ್ಲರೂ ಕನ್ನಡ ಬೆಳೆಯಬೇಕು, ಕನ್ನಡ ಬಳಸಬೇಕು ಎಂದು ಹೇಳುತ್ತೇವೆ. ಆದ್ರೆ ಅದಕ್ಕಾಗಿ ಹಲವಾರು ಜೀವಗಳು ನಿರಂತರವಾಗಿ ದುಡಿಯುತ್ತಿವೆ‌ ಹಾಗೂ ದುಡಿದಿದ್ದಾರೆ. ಅವರನ್ನೆಲ್ಲ ಗುರುತಿಸಿ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಗೌರವ ನೀಡುತ್ತಿದೆ. ಈ ಕನ್ನಡ ಹಬ್ಬಕ್ಕೆ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಂತರಾಷ್ಟ್ರೀಯ ರಾಯಭಾರಿಯಾಗಿ ನನ್ನನ್ನು ಭಾಗವಹಿಸಬೇಕು ಎಂದು ಹೇಳಿದಾಗ ತುಂಬಾ ಹಿರಿಮೆ ಅನಿಸಿತು. ಈ ರೀತಿಯ ಕಾರ್ಯಕ್ರಮದಿಂದ ವಿಚಾರಗಳ ವಿನಿಮಯ ಆಗುತ್ತೆ. ಈ ಕಾರ್ಯಕ್ರಮ ಬಹಳ ವಿಶೇಷವಾಗಿರುತ್ತೆ ಎಂದು ನಂಬಿದ್ದೇನೆ. ಎಲ್ಲರೂ ನವೆಂಬರ್ ಒನ್ ಕನ್ನಡಿಗರಾಗದೇ ನಂಬರ್ ಒನ್ ಕನ್ನಡಿಗರಾಗೋಣ ಎಂದು ನಟ ವಸಿಷ್ಠ ಸಿಂಹ ತಿಳಿಸಿದ್ರು.

ದುಬೈನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರೋದು ತುಂಬಾ ಖುಷಿಯ ವಿಚಾರ. ಹಲವು ಕಲಾವಿದರು ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಕ್ಕಾಗಿ ಶಿವಕುಮಾರ್ ಅವರಿಗೆ ಧನ್ಯವಾದ ಎಂದು ನಟಿ ಪ್ರೇಮ ತಿಳಿಸಿದ್ರು.vishwa kannada habba dubai

ಅಂತರಾಷ್ಟ್ರೀಯ ಮಟ್ಟದಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಕನ್ನಡ ಹಬ್ಬ ಕಾರ್ಯಕ್ರಮ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಇರುವ ಬೇರೆ ಬೇರೆ ಕಲೆಯ ಆಯ್ದ ಕಲಾವಿದರನ್ನು ದುಬೈಗೆ ಕರೆದುಕೊಂಡು ಹೋಗಿ ನಮ್ಮ ಕಲೆಯನ್ನು ಅಲ್ಲಿ ಪರಿಚಯಿಸುವ ಹಾಗೂ ಅವರನ್ನು ಗೌರವಿಸುವ ಉದ್ದೇಶವನ್ನು ಇದು ಒಳಗೊಂಡಿದೆ. ಕನ್ನಡವನ್ನು ವಿಶ್ವದಾದ್ಯಂತ ಪಸರಿಸುವ ಉದ್ದೇಶ ಹೊಂದಿರುವ ಈ ಕಾರ್ಯಕ್ರಮ ಮೂಲ ಕನ್ನಡಿಗರು ಹಾಗೂ ಅನಿವಾಸಿ ಕನ್ನಡಿಗರ ಬೆಸುಗೆಯಾಗಿದೆ. ಹಿರಿಯ ಪತ್ರಕರ್ತರಿಗೆ ಹಾಗೂ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಗೈದವರಿಗೆ ಪ್ರಶಸ್ತಿಯನ್ನು ಕೂಡ ನೀಡಿ ಗೌರವಿಸಲಾಗುತ್ತದೆ ಎಂದು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಡಾ. ಟಿ. ಶಿವಕುಮಾರ ನಾಗರ ನವಿಲೆ ಕಾರ್ಯಕ್ರಮದ ಬಗ್ಗೆ ಮಾಹಿತಿ ಹಂಚಿಕೊಂಡ್ರು.vishwa kannada habba dubai

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…