ನಟ ದರ್ಶನ್ ಅಭಿನಯದ 'ಡೆವಿಲ್' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ.
ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿದೆ. ಹಾಡಿನ ಚಿತ್ರೀಕರಣಕ್ಕಾಗಿ ತಂಡ ವಿದೇಶದ ಫ್ಲೈಟ್ ಏರಿದೆ.
ಹಲವು ದಿನಗಳಿಂದ 'ಡೆವಿಲ್' ಟೀಂ ಹಾಡಿನ ಚಿತ್ರೀಕರಣಕ್ಕಾಗಿ ಹೊರ ದೇಶಕ್ಕೆ ಹೋಗುವ ಬಗ್ಗೆ ಚರ್ಚೆ ನಡೀತಿತ್ತು. ಅಂತೂ ಇಂತೂ ತಂಡ ನಿನ್ನೆ(ಜುಲೈ 15) ರಾತ್ರಿ ಥಾಯ್ಲೆಂಡ್ ವಿಮಾನ ಏರಿದೆ.
ಸ್ವಿಟ್ಜರ್ಲೆಂಡ್ನಲ್ಲಿ 'ಡೆವಿಲ್' ಸಿನಿಮಾ ಸಾಂಗ್ ಶೂಟಿಂಗ್ ಪ್ಲ್ಯಾನ್ ಮಾಡಿತ್ತು ಚಿತ್ರತಂಡ. ಆದರೆ ರೇಣುಕಾಸ್ವಾಮಿ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ದರ್ಶನ್ಗೆ ಯೂರೋಪ್ ವೀಸಾ ಸಿಗಲಿಲ್ಲ. ಹಾಗಾಗಿ ಥೈಲ್ಯಾಂಡ್ನ ಫುಕೆಟ್ನಲ್ಲಿ ಚಿತ್ರೀಕರಣಕ್ಕೆ ಯತ್ನಿಸಲಾಯಿತು.
ಜುಲೈ 19ರಂದು ರಾತ್ರಿ 8 ಗಂಟೆಗೆ ಹೊಸ ಮೋಷನ್ ಪೋಸ್ಟರ್ನಲ್ಲಿ ರಿಲೀಸ್ ಡೇಟ್ ಅನೌನ್ಸ್ ಮಾಡಲು ತಂಡ ಮುಂದಾಗಿದೆ.
"ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ನಮ್ಮ'ದಿ ಡೆವಿಲ್' ಚಿತ್ರದ ಮೋಷನ್ ಪೋಸ್ಟರ್ ಇದೇ ಜುಲೈ 19ರ ಶನಿವಾರದಂದು ಸಂಜೆ 8 ಗಂಟೆಗೆ ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಹಾಗು ಅತ್ತಿಬೆಲೆಯಲ್ಲಿ ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಗಳ ಸಮ್ಮುಖದಲ್ಲೂ ಬಿಡುಗಡೆಯಾಗಲಿದೆ.