‘ಆಶಿಕಿ’ ಚಿತ್ರದ ಹಾಡುಗಳ ಮೆರವಣಿಗೆ ಶುರು- ಆಗಸ್ಟ್ 18ಕ್ಕೆ ಆಡಿಯೋ ರಿಲೀಸ್

Yaara Yaara Video Song Teaser | Ashiqui Movie

‘ಕ್ವಾಟ್ಲೆ’ ಸಿನಿಮಾ ಮೂಲಕ ಚಂದನವನದಲ್ಲಿ ಸಂಚಲನ ಮೂಡಿಸಿದ್ದ ನಿರ್ದೇಶಕಿ ಜೆ ಚಂದ್ರಕಲ. ಅವರ ನಿರ್ದೇಶನದಲ್ಲಿ ಮೂಡಿ ಬರ್ತಿರುವ ‘ಆಶಿಕಿ’ ಸಿನಿಮಾ ಬಗ್ಗೆ ಎಲ್ಲರೂ ಕೇಳಿರ್ತಿರ. ಸಾಕಷ್ಟು ನಿರೀಕ್ಷೆಯನ್ನು ಸೃಷ್ಟಿಸಿರುವ ‘ಆಶಿಕಿ’ ಸಿನಿಮಾ ಬಿಡುಗಡೆಗೂ ಮುನ್ನ ಹಾಡುಗಳ ಮೂಲಕ ಎಲ್ಲರ ಮನಸೂರೆಗೊಳ್ಳಲು ಸಜ್ಜಾಗಿದೆ. ಚಿತ್ರದ ‘ಯಾರಾ ಯಾರಾ’ ಹಾಡಿನ ವೀಡಿಯೋ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೂ ಮುನ್ನುಡಿ ಬರೆದಿದೆ ಚಿತ್ರತಂಡ. ಲಿಯೋ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಸ್ವತಃ ಚಿತ್ರದ ನಿರ್ದೇಶಕಿ ಜೆ ಚಂದ್ರಕಲ ಸಾಹಿತ್ಯ ಬರೆದಿದ್ದು ಅಶ್ವಿನ್ ಶರ್ಮಾ ದನಿಯಾಗಿದ್ದಾರೆ.Ashiqui Movie

ಮ್ಯೂಸಿಕಲ್ ಲವ್ ಸ್ಟೋರಿ ಹಾಗೂ ತ್ರಿಕೋನ ಪ್ರೇಮಕಥೆ ಹೊತ್ತ ‘ಆಶಿಕಿ’ ಚಿತ್ರದಲ್ಲಿ ಸಾಕಷ್ಟು ವರ್ಷ ಮಾಧ್ಯಮ ರಂಗದಲ್ಲಿ ಸಿನಿಮಾ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವ ಸಂದೀಪ್ ಕುಮಾರ್ ನಾಯಕರಾಗಿ ಅಭಿನಯಿಸಿದ್ದು ನಾಯಕಿಯಾಗಿ ಐಶ್ವರ್ಯ ಸಿಂಧೋಗಿ, ಹಾಗೂ ಇನ್ನೊಬ್ಬ ನಾಯಕನ ಪಾತ್ರದಲ್ಲಿ ಪ್ರದೀಪ್ ಕುಮಾರ್ ನಟಿಸಿದ್ದು ಗುರುಪ್ರಸಾದ್, ಸುಚೇಂದ್ರ ಪ್ರಸಾದ್, ತುಳಸಿ ಶಿವಮಣಿ, ಪ್ರಮೋದಿನಿ ಚಿತ್ರದ ತಾರಾಬಳಗದಲ್ಲಿದ್ದಾರೆ. ಇತ್ತಿಚೆಗಷ್ಟೆ ಸೆನ್ಸಾರ್ ಮಗಿಸಿರುವ ಆಶಿಕಿ ದಸರಾದಲ್ಲಿ ತೆರೆಗೆ ತರಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದ್ದು ಇದೇ ತಿಂಗಳಲ್ಲಿ ಚಿತ್ರದ ಆಡಿಯೋ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದ್ದು ಪ್ರತಿ ಹಾಡುಗಳು ಡಿಫ್ರೆಂಟ್ ಆಗಿ ಮೂಡಿ ಬಂದಿದೆ ಎನ್ನುತ್ತಾರೆ ಚಿತ್ರದ ನಿರ್ದೇಶಕಿ ಜೆ. ಚಂದ್ರಕಲಾ.Ashiqui Movie

ಕುಲು ಮನಾಲಿ, ಕೇರಳ, ಆಂಧ್ರಪ್ರದೇಶ, ಪಂಜಾಬ್, ಚಂಡೀಗಡ, ಚಿಕ್ಕಮಗಳೂರು, ಆಗ್ರಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಚಿತ್ರವನ್ನು ಸೆರೆ ಹಿಡಿಯಲಾಗಿದೆ. ಶ್ರೀ ಲಕ್ಷ್ಮೀ ನರಸಿಂಹ ಮೂವೀನ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಜಿ. ಚಂದ್ರಶೇಖರ್ ಬಂಡವಾಳ ಹೂಡಿದ್ದು, ರಾಜರತ್ನ, ನಿತಿನ್ ಅಪ್ಪಿ ಛಾಯಾಗ್ರಾಹಣ, ನಾಗೇಂದ್ರ ಅರಸ್ ಸಂಕಲನ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…