ಟೀಸರ್ ಮೂಲಕ‌ ಸದ್ದು ಮಾಡುತ್ತಿದೆ GL0PIXS ಅರ್ಪಿಸುವ “ಯದ್ಭಾವಂ ತದ್ಭವತಿ”.

"Yadbhavam Tadbhavati" presented by GL0PIXS is buzzing through the teaser.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿವಿಧ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಈಗಾಗಲೇ 54 ಪ್ರಶಸ್ತಿಗಳು ಬಂದಿದೆ.

ಬ್ರಹ್ಮ ಸಿನಿಮಾ ಹಾಲಿಕ್ ಡಿಜಿಟಲ್ ಸ್ಟುಡಿಯೋಸ್ ಹಾಗೂ ಬಿ.ಸಿ.ಡಿ ಸ್ಟುಡಿಯೋಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ, GlOPIXS ಅರ್ಪಿಸುವ “ಯದ್ಭಾವಂ ತದ್ಭವತಿ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ."Yadbhavam Tadbhavati" presented by GL0PIXS is buzzing through the teaser.

“ಯದ್ಭಾವಂ ತದ್ಭವತಿ” ಅಂದರೆ ನಾವು ಜಗತ್ತನ್ನು ಯಾವ ರೀತಿ ನೋಡುತ್ತೇವೊ, ಜಗತ್ತು ನಮ್ಮನ್ನು ಅದೇ ರೀತಿ ನೋಡುತ್ತದೆ ಎಂದು. ಈ ಹಿಂದೆ ಹಾಲಿವುಡ್ ಚಿತ್ರವೊಂದನ್ನು ನೋಡಿದ್ದೆ. ಆಗ ಈ ರೀತಿಯ ಕಾನ್ಸೆಪ್ಟ್ ನ ಚಿತ್ರ ಮಾಡಬೇಕೆಂದು ಕೊಂಡೆ. ಚಿತ್ರದಲ್ಲಿ‌ ನಾನೊಬ್ಬನೆ ನಟ. ಆದರೆ ಮೂರು ಪಾತ್ರ. ಮೂರು ಬೇರೆ ಬೇರೆ ರೀತಿಯ ಪಾತ್ರ. ನಿರ್ದೇಶನವನ್ನೂ ನಾನೇ ಮಾಡಿದ್ದೇನೆ. ಇನ್ನೂ ಖುಷಿಯ ವಿಚಾರವೆಂದರೆ ನಮ್ಮ ಚಿತ್ರ ವಿವಿಧ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ 54 ಕ್ಕೂ ಅಧಿಕ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತದೆ. ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಚನ್ನಪಟ್ಟಣದ ಬಳಿ ಇಪ್ಪತ್ತಕ್ಕೂ ಅಧಿಕ ದಿನಗಳ ಚಿತ್ರೀಕರಣ ಮಾಡಿದ್ದೇವೆ. ಈ ಹಿಂದೆ “ಹವಾಲ” ಎಂಬ ಚಿತ್ರ ನಿರ್ದೇಶನ ಮಾಡಿದ್ದ ನನಗೆ, ಇದು ಎರಡನೇ ಚಿತ್ರ. ಹದಿನೆಂಟು ವರ್ಷಗಳಿಂದ ಕಿರುತೆರೆ ಹಾಗೂ ಹಿರಿತೆರೆ ನಟನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ಚಿತ್ರದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ನಿರ್ದೇಶಕ – ನಟ ಅಮಿತ್ ರಾವ್, ಟೀಸರ್ ಬಿಡುಗಡೆ ಸಮಾರಂಭಕ್ಕೆ ಬಂದಿದ್ದ ಗಣ್ಯರಿಗೆ ಧನ್ಯವಾದ ತಿಳಿಸಿದರು."Yadbhavam Tadbhavati" presented by GL0PIXS is buzzing through the teaser.

ನಿರ್ಮಾಪಕ ಮಂಜುನಾಥ್ ಎಂ ದೈವಜ್ಞ, ಕಾಸ್ಟ್ಯೂಮ್ ಡಿಸೈನರ್ ರಶ್ಮಿ ಅನೂಪ್ ರಾವ್, ಸಂಗೀತ ನಿರ್ದೇಶಕ ರಾಕಿಸೋನು ಹಾಗೂ ಸುಪ್ರೀತ್ (ಡಿ ಐ – ವಿ ಎಫ್.ಎಕ್ಸ್) ಮುಂತಾದವರು ಚಿತ್ರದ ಬಗ್ಗೆ ಮಾತನಾಡಿದರು. ನಟ, ನಿರ್ದೇಶಕ ಹಾಗೂ ಸಂಕಲನಕಾರ ನಾಗೇಂದ್ರ ಅರಸ್, ನಿರ್ಮಾಪಕ ನಿತ್ಯಾನಂದ ಪ್ರಭು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು."Yadbhavam Tadbhavati" presented by GL0PIXS is buzzing through the teaser.

ಕನ್ನಡ ಚಿತ್ರರಂಗ ಈಗ ವಿಶ್ವದಾದ್ಯಂತ ಹೆಸರುವಾಸಿ. ಇಂತಹ ಕನ್ನಡ ಚಿತ್ರರಂಗದ ಬಗ್ಗೆ ಅಪಾರ ಅಭಿಮಾನವಿರುವ ಹಾಗೂ ಕನ್ನಡ ಚಿತ್ರಗಳು ಎಲ್ಲಾ ಕಡೆ ತಲುಪಬೇಕೆಂಬ ಸದ್ದುದ್ದೇಶ ಹೊಂದಿರುವ GL0PIXS ಎಂಬ ದೊಡ್ಡ ಸಂಸ್ಥೆ ಈ ಚಿತ್ರವನ್ನು ನೋಡಿ, ಮೆಚ್ಚಿ ಬಿಡುಗಡೆ ಮಾಡಲು ಮುಂದಾಗಿದೆ‌.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…