ಸಮಂತಾ ಡೆಡಿಕೇಷನ್ ನೋಡಿ ಬೆರಗಾದ ಹಾಲಿವುಡ್ ಸಾಹಸ ನಿರ್ದೇಶಕ ಯಾನಿಕ್ ಬೆನ್!

yashoda movie yannick ben

ಹರಿ-ಹರೀಶ್ ನಿರ್ದೇಶನದ ಸಮಂತಾ ಅಭಿನಯದ ಆಕ್ಷನ್ ಥ್ರಿಲ್ಲರ್ ಚಿತ್ರವಾದ ‘ಯಶೋದಾ’ ನ.11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಸಮಂತಾ ಅವರ ಕೆಲಸ ನೋಡಿ ಹಾಲಿವುಡ್ನ ಸಾಹಸ ನಿರ್ದೇಶಕ ಯಾನಿಕ್ ಬೆನ್ ಬೆರಗಾಗಿದ್ದಾರೆ.yashoda movie yannick ben

ಶ್ರೀದೇವಿ ಮೂವೀಸ್ ಅಡಿಯಲ್ಲಿ ಶಿವಲೆಂಕ ಕೃಷ್ಣ ಪ್ರಸಾದ್ ನಿರ್ಮಿಸಿರುವ ಈ ಅದ್ಧೂರಿ ಬಜೆಟ್ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಅಷ್ಟೇ ಅಲ್ಲ, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಒಂದು ಕಡೆ ಪ್ರೇಕ್ಷಕರು ಚಿತ್ರದಲ್ಲಿನ ಆಕ್ಷನ್ ದೃಶ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಚಿತ್ರದಲ್ಲಿ ಹೈ-ವೋಲ್ಟೇಜ್ ಫೈಟ್ಸ್ ಮತ್ತು ಸ್ಟಂಟ್‌ಗಳು ಚೆನ್ನಾಗಿ ಮೂಡಿ ಬರುವುದಕ್ಕೆ ಕಾರಣರಾಗಿರುವ ಸಮಂತಾ ಶ್ರದ್ಧೆಗೆ ಯಾನಿಕ್ ಬೆನ್ ಖುಷಿಯಾಗಿದ್ದಾರೆ.yashoda movie yannick ben

ಸಮಂತಾ ಮತ್ತು ಬೆನ್ ಒಟ್ಟಿಗೆ ಕೆಲಸ ಮಾಡುತ್ತಿರುವುದು ಇದು ಮೊದಲೇನಲ್ಲ.
ಈ ಹಿಂದೆ ಸಮಂತಾ ಅವರೊಂದಿಗೆ ‘ಫ್ಯಾಮಿಲಿ ಮ್ಯಾನ್ 2’ ವೆಬ್‌ಸೀರೀಸ್‌ಗಾಗಿ ಕೆಲಸ ಮಾಡಿದರು ಮತ್ತು ಈಗ ಅವರು ‘ಯಶೋದಾ’ದಲ್ಲಿ ಅತ್ಯುತ್ತಮ ಆಕ್ಷನ್‌ಗಾಗಿ ಜೊತೆಯಾಗಿದ್ದಾರೆ. ಚಿತ್ರದಲ್ಲಿ ಆಕ್ಷನ್ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿರುವುದಕ್ಕೆ ಸಮಂತಾ ಅವರ ಸಮರ್ಪಣಾ ಮನೋಭಾವ ಮತ್ತು ಇಚ್ಛಾಶಕ್ತಿಯೇ ಕಾರಣ ಎಂದು ಮೆಚ್ಚಿ ಮಾತನಾಡಿದ್ದಾರೆ.yashoda movie yannick benಐಕಿಡೊ, ಕಿಕ್ ಬಾಕ್ಸಿಂಗ್, ಜಿಮ್ನಾಸ್ಟಿಕಗಸ್ ಮುಂತಾದ ಕಲೆಗಳಲ್ಲಿ ಪರಿಣಿತರಾಗಿರುವ ಬೆನ್, ಹಾಲಿವುಡ್ನ ‘ಟ್ರಾನ್ಸ್ಪೋರ್ಟರ್’, ‘ಇನ್ಸೆಪ್ಷನ್’, ಬಾಲಿವುಡ್ನ ‘ಟೈಗರ್ ಜಿಂದಾ ಹೈ’, ‘ರಯೀಸ್’, ತೆಲುಗಿನ ‘ಅತ್ತಾರಿಂಟಿಕಿ ದಾರೇದಿ’, ‘ನೇನೋಕ್ಕೊಡೇನ್’ ಮುಂತಾದ ಚಿತ್ರಗಳಿಗೆ ಸಾಹಸ ಸಂಯೋಜನೆ ಮಾಡಿದ್ದಾರೆ.

‘ಯಶೋದಾ’ ಚಿತ್ರದಲ್ಲಿ ಚಿತ್ರದಲ್ಲಿ ಸಮಂತಾ ಜೊತೆಗೆ ವರಲಕ್ಷ್ಮಿ ಶರತ್‌ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮಾ ಮುಂತಾದವರು ನಟಿಸಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಏಕಕಾಲಕ್ಕೆ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…