ಸತ್ಯ ಗಣಪತಿ ಸನ್ನಿಧಿಯಲ್ಲಿ “ಯಾವ ಮೋಹನ ಮುರಳಿ ಕರೆಯಿತು” ಚಿತ್ರಕ್ಕೆ ಮುಹೂರ್ತ.

ಕವಿ ಗೋಪಾಲಕೃಷ್ಣ ಅಡಿಗರ “ಯಾವ ಮೋಹನ ಮುರಳಿ ಕರೆಯಿತು” ಹಾಡನ್ನು ಕೇಳದ ಕಿವಿಗಳೇ ಇಲ್ಲ ಅನಿಸುತ್ತದೆ. ಈಗಲೂ ಈ ಹಾಡು ಎಲ್ಲೋ ಕೇಳಿ ಬಂದರೂ, ಅದರೊಟ್ಟಿಗೆ ಗುನಗುವ ಗೀತೆ ಅದು.

ಈಗ ಆ ಹಾಡಿನ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಮುಹೂರ್ತ ಸಮಾರಂಭ ಜೆ.ಪಿ.ನಗರದ ಶ್ರೀ ಸತ್ಯಗಣಪತಿ ದೇವಸ್ಥಾನದಲ್ಲಿ ನೆರವೇರಿತು. ನಿರ್ಮಾಪಕ ಟಿ.ಪಿ.ಸಿದ್ದರಾಜು ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ, ಶುಭ ಕೋರಿದರು. ನಾಗೇಂದ್ರ ರೆಡ್ಡಿ ಹಾಗೂ ಲಕ್ಕಿ ಕ್ಯಾಮೆರಾ ಚಾಲನೆ ಮಾಡಿದರು. ಸಾಕಷ್ಟು ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು.WhatsApp Image 2022 06 19 at 8.57.23 PM

ಪ್ರಕೃತಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶರಣಪ್ಪ ಗೌರಮ್ಮ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ವಿಶ್ವಾಸ್ ಕೃಷ್ಣ ನಿರ್ದೇಶಿಸುತ್ತಿದ್ದಾರೆ.
ಕನ್ನಡದ ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ವಿಶ್ವಾಸ್ ಕೃಷ್ಣ ಅವರಿಗೆ ಇದು ಮೊದಲ ನಿರ್ದೇಶನದ
ಚಿತ್ರ.WhatsApp Image 2022 06 19 at 8.57.23 PM 1

ಕೌಟುಂಬಿಕ ಕಥಾಹಂದರದ ಈ ಚಿತ್ರಕ್ಕೆ ನಿರ್ದೇಶಕರೆ, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ ಸಂಗೀತ ನೀಡಲಿದ್ದಾರೆ ಹಾಗೂ ಕೀರ್ತನ್ ಪೂಜಾರಿ ಛಾಯಾಗ್ರಹಣ ಈ ಚಿತ್ರಕ್ಕಿದೆ.WhatsApp Image 2022 06 19 at 8.57.23 PM 2

ಜುಲೈನಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಜೋಗದ ಬಳಿಯ ಕಾರ್ಗಲ್ ಹಾಗೂ ಭಟ್ಕಳದಲ್ಲಿ ಚಿತ್ರೀಕರಣ ನಡೆಯಲಿದೆ. ಮಾಧವ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ. ಸ್ವಪ್ನ ಶೆಟ್ಟಿಗಾರ್. ಬೇಬಿ ಪ್ರಕೃತಿ, ಪಟೇಲ್ ವರುಣ್ ರಾಜು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ನಾಯಿ ರಾಕಿ ಕೂಡ ಈ ಚಿತ್ರದಲ್ಲಿ ಪ್ರಮುಖಪಾತ್ರ ನಿರ್ವಹಿಸುತ್ತಿದೆ.WhatsApp Image 2022 06 19 at 8.57.24 PM

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…