ಸ್ನೇಹಿತರ ಗ್ಯಾಂಗ್ ಸೇರಿ ನಿರ್ಮಿಸಿರುವ “ಯೆಲ್ಲೋ ಗ್ಯಾಂಗ್ಸ್” ಟ್ರೇಲರ್ ಬಿಡುಗಡೆ.

yellow gang kannada movie nov 11th release

ಟ್ರೇಲರ್ ಮೂಲಕವೇ ಕುತೂಹಲ ಹುಟ್ಟಿಸಿರುವ ಈ ಚಿತ್ರ ನವೆಂಬರ್ 11 ರಂದು ತೆರೆಗೆ.

ಮಾಮೂಲಿ ತರಹದ ಕಥೆಯಲ್ಲದೇ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳಿಗೆ ಕನ್ನಡ ಪ್ರೇಕ್ಷಕರು ಜೈ ಎಂದದ್ದು ಹೆಚ್ಚು. ಅಂತಹ ವಿಭಿನ್ನ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಯೆಲ್ಲೋ ಗ್ಯಾಂಗ್ಸ್” ಚಿತ್ರದ ಟ್ರೇಲರ್ ವಿಭಿನ್ನವಾಗಿದ್ದು, ನೋಡುಗರಲ್ಲಿ ಕುತೂಹಲ ಮೂಡಿಸಿದೆ. ಹಲವಾರು ಸ್ನೇಹಿತರ ಸಮ್ಮಿಲನದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ನವೆಂಬರ್ 11 ರಂದು ತೆರೆ ಕಾಣುತ್ತಿದೆ.yellow gang kannada movie nov 11th release

ಬೇರೊಂದು ಉದ್ಯೋಗ ಮಾಡುತ್ತಿದ್ದ ನನ್ನನ್ನು ಚಿತ್ರರಂಗ ಆಕರ್ಷಿಸಿತ್ತು. ಮೊದಲ ಪ್ರಯತ್ನವಾಗಿ ಈ ಚಿತ್ರ ನಿರ್ದೇಶಿಸಿದ್ದೇನೆ. ಕನ್ನಡದಲ್ಲಿ ಕ್ರೈಮ್ ಥ್ರಿಲ್ಲರ್ ಚಿತ್ರಗಳು ಬಂದಿದೆಯಾದರೂ, ಇದು ಸ್ವಲ್ಪ ಭಿನ್ನ. ನಾಯಕ ದೇವ್ ದೇವಯ್ಯ, ನಾಯಕಿ ಅರ್ಚನಾ ಕೊಟ್ಟಿಗೆ ಸೇರಿದಂತೆ ಹತ್ತೊಂಬತ್ತು ಪ್ರಮುಖ ಪಾತ್ರಗಳು ನಮ್ಮ ಚಿತ್ರದಲ್ಲಿದೆ. ಎಲ್ಲಾ ಪಾತ್ರಗಳ ಮೇಲೂ ನಮ್ಮ ಚಿತ್ರದ ಕಥೆ ಸಾಗುತ್ತದೆ. ಮೂರು ಗ್ಯಾಂಗ್ ಗಳಿದ್ದು, ಅದಕ್ಕೆ ಮೂರು ಜನ ಮುಖ್ಯಸ್ಥರಿರುತ್ತಾರೆ. ಸುಜ್ಞಾನ್ ಅವರ ಸುಂದರ ಛಾಯಾಗ್ರಹಣ ಹಾಗೂ ರೋಹಿತ್ ಸೋವರ್ ಅವರ ಸಂಗೀತ ನಿರ್ದೇಶನ ಈ ಚಿತ್ರದ ಹೈಲೆಟ್. ಇಡೀ ಚಿತ್ರವನ್ನು ಟ್ರ್ಯಾಲಿ ಬಳಸದೆ , ಕೈಯಲ್ಲಿ ಕ್ಯಾಮೆರಾ ಹಿಡಿದು ಚಿತ್ರಿಸಿರುವುದು ವಿಶೇಷ. ಇಂತಹ ಹಲವು ವಿಶೇಷಗಳ ಸಂಗಮವಾಗಿರುವ ನಮ್ಮ “ಯೆಲ್ಲೋ ಗ್ಯಾಂಗ್ಸ್” ಗೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ದೇಶಕ ರವೀಂದ್ರ ಪರಮೇಶ್ವರಪ್ಪ.yellow gang kannada movie nov 11th release

ವಿಭಿನ್ನ ಸ್ಟುಡಿಯೋಸ್, ವಾಟ್ ನೆಕ್ಸ್ಟ್ ಮೂವೀಸ್ ಹಾಗೂ ಕೀ ಲೈಟ್ಸ್ ಸಂಸ್ಥೆ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಶಿವಮೊಗ್ಗದ ನವೋದಯ ಶಾಲೆಯಲ್ಲಿ ಓದಿರುವ ಸಾಕಷ್ಟು ವಿದ್ಯಾರ್ಥಿಗಳು ಈ ಚಿತ್ರಕ್ಕೆ ಹಣ ಹೂಡಿದ್ದೇವೆ. ಏಕೆಂದರೆ ನಿರ್ದೇಶಕ ರವೀಂದ್ರ ನಮ್ಮ ಸಹಪಾಠಿ. ಮೊದಲಿನಿಂದಲೂ ಅವರ ಯೋಚನೆ ವಿಭಿನ್ನವಾಗಿರುವುದರಿಂದ ನಮ್ಮ ಸಂಸ್ಥೆಗೆ ವಿಭಿನ್ನ ಸ್ಟುಡಿಯೋಸ್ ಎಂದು ಹೆಸರಿಟ್ಟಿದ್ದೇವೆ ಎಂದರು ನಿರಂಜನ್.yellow gang kannada movie nov 11th release

ವಿಕ್ರಮ್ ಎಂಬ ಹೆಸರಿನಿಂದ ಪೊಲೀಸ್ ಅಧಿಕಾರಿಯಾಗಿ ಈ ಚಿತ್ರದಲ್ಲಿ ಅಭಿನಯಿಸಿರುವುದಾಗಿ ನಾಯಕ ದೇವ್ ದೇವಯ್ಯ ಹೇಳಿದರು. ನನಗೆ ಇದೊಂದು ಉತ್ತಮ ಚಿತ್ರವೆಂದರು ನಾಯಕಿ ಅರ್ಚನಾ ಕೊಟ್ಟಿಗೆ.

ಚಿತ್ರದಲ್ಲಿ ನಟಿಸಿರುವ ಸತ್ಯ ಬಿ.ಜಿ, ಅರುಣ್ ಕುಮಾರ್, ನಾಟ್ಯ ರಂಗ, ವಿನೀತ್ ಕಟ್ಟಿ ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು. ಹಾಡುಗಳಿಲ್ಲ. ರೀರೇಕಾರ್ಡಿಂಗ್ ಚಿತ್ರದ ಹೈಲೆಟ್ ಎಂದರು ಸಂಗೀತ ನಿರ್ದೇಶಕ ರೋಹಿತ್.yellow gang kannada movie nov 11th release

ಸಹ ನಿರ್ಮಾಪಕ ಮನೋಜ್ ಪಿ ಅವರ ಪುತ್ರಿ ಪ್ರತೀಕ್ಷ ಟ್ರೇಲರ್ ಬಿಡುಗಡೆ ಮಾಡಿದರು. ನಿರ್ದೇಶಕರೊಟ್ಟಿಗೆ ಸಂಭಾಷಣೆ ಬರೆದಿರುವ ಪ್ರವೀಣ್ ಕುಮಾರ್ ಅಚ್ಚುಕಟ್ಟಾಗಿ ಸಮಾರಂಭ ನಡೆಸಿಕೊಟ್ಟರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…