ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ “ಅಪ್ಪುಗೆ” ಹಾಡು ಪುನೀತ್ ರಾಜಕುಮಾರ್ ಪುತ್ರಿ ವಂದಿತ ಅವರಿಂದ ಬಿಡುಗಡೆ‌.

ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ “ಯುವ” ಚಿತ್ರದ “ಅಪ್ಪುಗೆ” Yuva Appuge Lyrical ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.Yuva Appuge Lyrical 2

“ಯವ”, ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ – ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನು ನಿರೀಕ್ಷಿಸುವುದಿಲ್ಲ. ಕುಟುಂಬದಲ್ಲಿ ಅಪ್ಪನ ಪಾತ್ರ ಬಹಳ ದೊಡ್ಡದು. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ನಮ್ಮ ಚಿತ್ರದ “ಅಪ್ಪುಗೆ” ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಅಪ್ಪನ ಕುರಿತಾದ ಹಾಡಾಗಿರುವುದರಿಂದ ಈ ಹಾಡನ್ನು ವಂದಿತ ಅವರಿಂದ ಬಿಡುಗಡೆ ಮಾಡಿಸೋಣ ಅಂದುಕೊಂಡೆವು‌. ಹಾಡು ಬಿಡುಗಡೆ ಮಾಡಿಕೊಟ್ಟ ವಂದಿತ ಅವರಿಗೆ ಧನ್ಯವಾದ. ಇನ್ನು, ಮಾರ್ಚ್ 21 ರಂದು “ಯುವ” ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಮಾರ್ಚ್ 23 ರಂದು ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು.Yuva Appuge Lyrical 2

ಈ ಚಿತ್ರದ ಕಥೆಗೂ ಹಾಗೂ ನನ್ನ ಜೀವನದ ಕಥೆಗೂ ಸುಮಾರು ವಿಷಯಗಳು ಹೋಲುತ್ತದೆ ಎಂದು ಮಾತು ಆರಂಭಿಸಿದ ನಾಯಕ ಯುವ ರಾಜಕುಮಾರ್, ತಂದೆ – ಮಗನ ಸಂಬಂಧ ಬೇರೆ ರೀತಿಯದೆ ಸಂಬಂಧ. ತಂದೆಯ ಜವಾಬ್ದಾರಿ ನಮಗೆ ಅರ್ಥವಾಗುವುದೇ ಇಲ್ಲ. ನಾವು ದುಡಿಯುವುದಕ್ಕೆ ಶುರು ಮಾಡಿದಾಗ ನಮಗೆ ತಂದೆಯ ಜವಾಬ್ದಾರಿ ತಿಳಿಯುತ್ತಾ ಹೋಗುತ್ತದೆ. ಈ ಚಿತ್ರದಲ್ಲಿ ಅಚ್ಯುತಕುಮಾರ್ ಅವರು ನನ್ನ ತಂದೆ ಪಾತ್ರ ಮಾಡಿದ್ದಾರೆ‌. ಅವರೊಂದಿಗೆ ಕೆಲವು ಸನ್ನಿವೇಶಗಳಲ್ಲಿ ನಟಿಸಬೇಕಾದರೆ ನನಗೆ ನಮ್ಮ ಅಪ್ಪ ಕಣ್ಣ ಮುಂದೆ ಬರುತ್ತಿದ್ದರು. ಅಂತಹ ಅಪ್ಪ – ಮಗನ ನಡುವಿನ ಸಂಬಂಧವನ್ನು ಬಣ್ಣಿಸುವ ಈ “ಅಪ್ಪುಗೆ” ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ ಎಂದರು.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. “ಅಪ್ಪುಗೆ” ಮೂರನೇ ಹಾಡಾಗಿ ಬಿಡುಗಡೆಯಾಗಿದೆ. ಅಪ್ಪ – ಮಗನ ಸಂಬಂಧದ ಈ ಹಾಡು ತುಂಬಾ ಚೆನ್ನಾಗಿದೆ. ಈ ಹಾಡು ಕೇಳಿದಾಗಲ್ಲೆಲ್ಲಾ ನನಗೆ ನಮ್ಮ ತಂದೆ ನೆನಪಾಗುತ್ತಾರೆ ಎಂದು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಭಾವುಕರಾದರು.Yuva Appuge Lyrical 2

“ಯುವ” ಚಿತ್ರದ ಆಡಿಯೋ ಹಕ್ಕನ್ನು ನಮ್ಮ ಆನಂದ್ ಆಡಿಯೋ ಸಂಸ್ಥೆಗೆ ನೀಡಿರುವುದಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸಂಸ್ಥೆ ಆರಂಭವಾಗಿ 25 ವರ್ಷಗಳಾಗುತ್ತಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಆನಂದ್ ಆಡಿಯೋ ಶ್ಯಾಮ್.

ಛಾಯಾಗ್ರಾಹಕ ಶ್ರೀಶ ಕುದುವಳ್ಳಿ, ಸಂಕಲನಕಾರ ಆಶಿಕ್ ಕುಸುಗೊಳ್ಳಿ ಹಾಗೂ ಕಾರ್ಯಕಾರಿ ನಿರ್ಮಾಪಕ ಯೋಗಿ ಜಿ ರಾಜ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಹಾಡು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. .

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…